ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ ; ಇಡಿ ತನಿಖೆಯಲ್ಲಿ ಪತ್ತೆ, 20.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು 

23-01-26 03:21 pm       Bangalore Correspondent   ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಸ್.ಕೆ. ಮರಿಗೌಡ ಕೂಡ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳನ್ನು ಪಡೆದಿದ್ದ ವಿಚಾರ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಮರಿಗೌಡಗೆ ಸಂಬಂಧಿಸಿದ 20.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಬೆಂಗಳೂರು, ಜ.23 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಸ್.ಕೆ. ಮರಿಗೌಡ ಕೂಡ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳನ್ನು ಪಡೆದಿದ್ದ ವಿಚಾರ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಮರಿಗೌಡಗೆ ಸಂಬಂಧಿಸಿದ 20.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಮುಡಾ ಅಧ್ಯಕ್ಷರಾಗಿದ್ದ ಮರಿಗೌಡ ಅಕ್ರಮ ಮಾರ್ಗದಲ್ಲಿ ಆಗಿನ ಮುಡಾ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಹಾಯದ ಮೂಲಕ ನಿವೇಶನಗಳನ್ನು ಪಡೆದಿದ್ದರು. ಮರಿಗೌಡ ಅವರು ದಿನೇಶ್‌ ಕುಮಾರ್ ಅವರಿಂದ ಅಕ್ರಮ ಲಾಭ ಪಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಮರಿಗೌಡ ಅವರು ಮುಡಾದಿಂದ ವಾಮಮಾರ್ಗದಲ್ಲಿ ಮಂಜೂರು ಮಾಡಿಸಿಕೊಂಡಿದ್ದ ಆರು ನಿವೇಶನಗಳು ಹಾಗೂ ಮೂರು ವಸತಿ ಸಂಕೀರ್ಣ ಕಟ್ಟಡಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸ್ಥಿರಾಸ್ತಿ ಮೌಲ್ಯ 20.85 ಕೋಟಿ ರೂ.ಗಳಾಗಿದೆ ಎಂದು ಇ.ಡಿ ತಿಳಿಸಿದೆ. 

460 ಕೋಟಿ ರೂ. ಆಸ್ತಿ ಮುಟ್ಟುಗೋಲು

ಮುಡಾ ನಿವೇಶನಗಳನ್ನು ಅಕ್ರಮ ಮಾರ್ಗದಲ್ಲಿ ಹಂಚಿಕೆ ಮಾಡಿರುವ ಪ್ರಕರಣ ಸಂಬಂಧ ಇ.ಡಿ ತನಿಖೆ ನಡೆಸುತ್ತಿದೆ. ಇದುವರೆಗೂ 460 ಕೋಟಿ ರೂ. ಮೌಲ್ಯದ ఆస్తి ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ಜಿ.ಟಿ.ದಿನೇಶ್‌ ಕುಮಾರ್ ಮತ್ತಿತರರು ಅಕ್ರಮವಾಗಿ ಸಂಪಾದನೆ ಮಾಡಿದ್ದ 283 ನಿವೇಶನಗಳನ್ನು ಇ.ಡಿ ಜಪ್ತಿ ಮಾಡಿತ್ತು.

'ಬಿ' ರಿಪೋರ್ಟ್ ವಿಚಾರಣೆ 28ಕ್ಕೆ

ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿದಂತೆ ಐದು ಮಂದಿಗೆ ಕ್ಲೀನ್‌ ಚಿಟ್ ನೀಡಿದ್ದ 'ಬಿ' ರಿಪೋರ್ಟ್ ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜ.28ಕ್ಕೆ ಮುಂದೂಡಿದೆ. ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಹಾಗೂ ಇತರರ ಪಾತ್ರವಿಲ್ಲ ಎಂದು ದೋಷಮುಕ್ತಗೊಳಿಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಜತೆಗೆ, ನ್ಯಾಯಾಲಯದ ಅನುಮತಿ ಪಡೆದು ತನಿಖೆ ಮುಂದುವರಿಸಿದ್ದರು. 'ಬಿ' ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

The Enforcement Directorate has attached assets worth ₹20.85 crore belonging to S.K. Marigowda, a close aide of Karnataka Chief Minister Siddaramaiah, in connection with the MUDA illegal site allotment case. ED investigations revealed that Marigowda allegedly acquired plots and buildings through unlawful means with the help of former MUDA commissioner G.T. Dinesh Kumar.