ಬ್ರೇಕಿಂಗ್ ನ್ಯೂಸ್
30-01-26 06:35 pm Bangalore Correspondent ಕರ್ನಾಟಕ
ಬೆಂಗಳೂರು, ಜ.30 : ದೇಶ- ವಿದೇಶದಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ ರಾಯ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಚ್ಮಂಡ್ ಸರ್ಕಲ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ಸಮ್ಮುಖದಲ್ಲಿಯೇ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿದ್ದಾರೆ. ಅವರನ್ನು ಕೂಡಲೇ ಎಚ್ಎಸ್ಆರ್ ಲೇಔಟ್ ನಲ್ಲಿರುವ ನಾರಾಯಣ ಹಾಸ್ಪಿಟಲ್ ಗೆ ಸೇರಿಸಿದರೂ, ಅಲ್ಲಿ ಅವರು ಅಸುನೀಗಿದ್ದಾರೆ.
ಸಿಜೆ ರಾಯ್ ದಿಢೀರ್ ಸಾವು ಉದ್ಯಮ ವಲಯದಲ್ಲಿ ಆಘಾತ ಮೂಡಿಸಿದೆ. ಕೆಲವು ದಿನಗಳಿಂದ ಐಟಿ ಅಧಿಕಾರಿಗಳು ಇವರ ಕಚೇರಿ, ಉದ್ಯಮ ಸಮೂಹದ ವಿಚಾರದಲ್ಲಿ ಪರಿಶೀಲನೆ ಕೈಗೊಂಡಿದ್ದು ಇಂದು ಕೂಡ ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ರಾಯ್ ಸಮ್ಮುಖದಲ್ಲಿಯೇ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿತ್ತು. ಇದರಿಂದ ತೀವ್ರ ಒತ್ತಡಕ್ಕೆ ಒಳಗಾದ ರಾಯ್ ತನ್ನ ಪಿಸ್ತೂಲಿನಿಂದ ಎದೆಗೆ ಶೂಟ್ ಮಾಡಿಕೊಂಡಿದ್ದಾರೆ. ಅಲ್ಲಿದ್ದ ಅಧಿಕಾರಿಗಳೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಎರಡು ಇನೋವಾ ಕಾರಿನಲ್ಲಿ ಬಂದಿದ್ದರು ಎನ್ನುವ ಮಾಹಿತಿ ಲಭಿಸಿದೆ.
ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದು ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು. ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದಲ್ಲದೆ, ಗಲ್ಫ್ ಮತ್ತು ಕೇರಳ, ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು. ರಾಯ್ ಅವರು ಕಾರುಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು, ದುಬೈ ಮತ್ತು ಭಾರತದಲ್ಲಿ ದುಬಾರಿ ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳನ್ನು ಹೊಂದಿದ್ದರು.
In a shocking development that has rattled India’s real estate and business community, Confident Group chairman Dr. CJ Roy died by suicide on Friday, January 30, 2026. The 57-year-old founder of the well-known real estate conglomerate was found dead after reportedly shooting himself at his office in central Bengaluru’s Richmond Circle area.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm