ಬ್ರೇಕಿಂಗ್ ನ್ಯೂಸ್
03-02-26 05:03 pm HK News Desk ಕರ್ನಾಟಕ
ಕಾರವಾರ, ಫೆ.3 : ಜ್ಯೋತಿಷಿ ಜೊತೆಗಿನ ಮಹಿಳೆಯ ಅಕ್ರಮ ಸಂಬಂಧದ ಆರೋಪದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ವ್ಯಕ್ತಿಯೊಬ್ಬನ ಕೊಲೆಗೆ ಕಾರಣವಾಗಿದೆ. ಕಮಲಾಕರ ಭಟ್ ಗುರೂಜಿ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಕ್ಕೆ ಆರು ಮಂದಿಯ ತಂಡ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಶಿವಮೊಗ್ಗ ಮೂಲದ ಕಮಲಾಕರ ಭಟ್ ಎಂಬ ಗುರೂಜಿಯೊಂದಿಗೆ ಸುಚಿತ್ರಾ ಎಂಬ ಮಹಿಳೆ ಅಕ್ರಮ ಸಂಬಂಧ ಹೊಂದಿದ್ದು ಇದರ ಬಗ್ಗೆ ಆಕೆಯ ಪತಿ ಮಹೇಶ್ ನಾಯ್ಕ್ ಪೊಲೀಸರಿಗೆ ದೂರು ನೀಡಿದ್ದರು. ಕಮಲಾಕರ ಭಟ್ ಮೂಲತಃ ಸಿದ್ದಾಪುರ ತಾಲೂಕಿನ ಹೆಮ್ಮನಬೈಲ್ ಗ್ರಾಮದ ನಿವಾಸಿಯಾಗಿದ್ದು ಮಹೇಶ್ ನಾಯ್ಕ್ ದೂರಿನಂತೆ ಪೊಲೀಸರು ಕಮಲಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರಿಂದ ಆಕ್ರೋಶಗೊಂಡ ಸುಚಿತ್ರಾ, ಮತ್ತು ಆಕೆಯ ತಂದೆ ಲೋಕನಾಥ ಚೌಡಪ್ಪ ನಾಯ್ಕ್ ಹಾಗೂ ಅವರ ಸಹಚರರು ಮಹೇಶ್ ನಾಯ್ಕ್ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ದಾಳಿ ವೇಳೆ ಮಹೇಶ್ ನಾಯ್ಕ್, ವಸಂತ ನಾಯ್ಕ್ ಮತ್ತು ಕುಮಾರ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ವಸಂತ ನಾಯ್ಕ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಘಟನೆ ಬಳಿಕ ಆರೋಪಿಗಳು ಪರಾರಿಯಾಗಲು ಯತ್ನಿಸಿದರೂ, ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಕಮಲಾಕರ ಭಟ್ ಸೇರಿ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಇತರ ಅಪರಿಚಿತ ಆರೋಪಿಗಳು, ಎ4 ಕಮಲಾಕರ ಭಟ್ ಎಂದು ಆರೋಪಿಗಳನ್ನು ಗುರುತಿಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಗಂಡ ಮಹೇಶ್ ನಾಯ್ಕ್ ಬೆಂಗಳೂರಿನಲ್ಲಿದ್ದರೆ, ಇಬ್ಬರು ಬೆಳೆದು ನಿಂತ ಹೆಣ್ಣು ಮಕ್ಕಳೊಂದಿಗೆ ಸುಚಿತ್ರಾ ಸಿದ್ದಾಪುರದಲ್ಲಿ ವಾಸವಿದ್ದಳು. ಸುಚಿತ್ರಾಳಿಗೆ ಇತ್ತೀಚೆಗೆ ಜ್ಯೋತಿಷಿ ಕಮಲಾಕರ್ ಭಟ್ ಪರಿಚಯವಾಗಿತ್ತು. ನಂತರ ಇಬ್ಬರ ನಡುವೆ ಸಲುಗೆ ಬೆಳೆದು ಕಮಲಾಕರ್ ಭಟ್ ಕೆಲವೊಮ್ಮೆ ಸುಚಿತ್ರಾ ಮನೆಗೆ ಬಂದು ಅಲ್ಲಿಯೇ ಉಳಿಯುತ್ತಿದ್ದನು. ಇದರಿಂದ ಕಸಿವಿಸಿಕೊಂಡಿದ್ದ ಹಿರಿಯ ಮಗಳು ತಾಯಿ ವರ್ತನೆಯನ್ನು ಪ್ರಶ್ನಿಸಿದ್ದಳು. ಕೋಪಗೊಂಡ ಸುಚಿತ್ರಾ ಮಕ್ಕಳಿಗೆ ಹಿಂಸೆ ನೀಡಲು ಶುರು ಮಾಡಿದ್ದಳು. ಕೊನೆಗೆ ಹಿರಿಯ ಪುತ್ರಿ ಎಲ್ಲಾ ವಿಚಾರವನ್ನು ತಂದೆಗೆ ತಿಳಿಸಿದ್ದಾಳೆ.
ಮಗಳಿಂದ ಪತ್ನಿಯ ಅಕ್ರಮ ಸಂಬಂಧದ ವಿಷಯ ತಿಳಿದ ಮಹೇಶ್ ನಾಯ್ಕ್ ಊರಿಗೆ ತೆರಳಿದ್ದು ಸಿದ್ದಾಪುರ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿ ಸಹೋದರ ವಸಂತ್ ಮನೆಗೆ ಮಹೇಶ್ ತೆರಳಿದ್ದರು. ತಮ್ಮ ವಿರುದ್ಧ ದೂರು ನೀಡಿರುವ ವಿಚಾರ ತಿಳಿದ ಸುಚಿತ್ರಾ ಮತ್ತು ಆಕೆಯ ತಂದೆ ಲೋಕನಾಥ್ ಗುರೂಜಿ ಪರವಾಗಿ ಗುಂಪು ಕಟ್ಟಿಕೊಂಡು ವಸಂತ್ ಮನೆಗೆ ಹೋಗಿ ಗಲಾಟೆ ಮಾಡಿದ್ದಾರೆ. ನಂತರ ಮಹೇಶ್ ನಾಯ್ಕ್, ವಸಂತ್ ನಾಯ್ಕ್ ಮತ್ತು ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ವಸಂತ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
A complaint over an alleged illicit relationship between a woman and astrologer Kamalakar Bhat led to a violent attack in Siddapur, Uttara Kannada district. After the woman’s husband filed a police complaint, a group allegedly assaulted him and his relatives. Vasanth Naik died on the way to the hospital, while two others are in critical condition.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm