ಬ್ರೇಕಿಂಗ್ ನ್ಯೂಸ್
05-02-26 10:37 am Bangalore Correspondent ಕರ್ನಾಟಕ
ಬೆಂಗಳೂರು, ಫೆ.5 : ಸರ್ಕಾರಿ ಆಸ್ಪತ್ರೆಗಳನ್ನು ಬಡವರ ಸಂಜೀವಿನಿ ಎಂದು ಕರೆಯಲಾಗುತ್ತಿದ್ರೂ, ರೋಗಿಗಳು ದಿನೇ ದಿನೇ ಹೊಸ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ತೀವ್ರ ಕೊರತೆ ಉಂಟಾಗಿದ್ದು, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭಿಸುತ್ತಿಲ್ಲ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದೆ.
ಔಷಧಿ ಕೊರತೆ ಕುರಿತು ಹಲವು ಬಾರಿ ಆರೋಗ್ಯ ಸಚಿವರ ಗಮನಕ್ಕೆ ತಂದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಸಂಘ ಆರೋಪಿಸಿದೆ. ಕಾಲ ಕಾಲಕ್ಕೆ ಅಗತ್ಯ ಔಷಧಿಗಳ ಸರಬರಾಜು ಆಗದೇ ಇರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವ್ಯವಸ್ಥೆಯೇ ಕುಂಠಿತವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಪ್ರಮುಖವಾಗಿ ಐವಿ ದ್ರಾವಣಗಳು, ಆಂಟಿ ಬಯೋಟಿಕ್ಗಳು ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯವಾದ ಔಷಧಿಗಳು ಲಭ್ಯವಿಲ್ಲದಿರುವುದು ಗಂಭೀರ ಸಮಸ್ಯೆಯಾಗಿದೆ. ಔಷಧಿ ಸರಬರಾಜು ಕುರಿತು ಹಲವು ಸಭೆಗಳು ನಡೆದಿದ್ದು, ಲಿಖಿತ ಮನವಿಗಳನ್ನೂ ಸಲ್ಲಿಸಲಾಗಿದೆ. ಆದರೂ ಯಾವುದೇ ಫಲಿತಾಂಶ ಕಂಡುಬಂದಿಲ್ಲ ಎಂದು ವೈದ್ಯಾಧಿಕಾರಿಗಳ ಸಂಘ ಹೇಳಿದೆ.
ಇನ್ನೊಂದೆಡೆ, ಸರ್ಕಾರದಿಂದ ಲಭ್ಯವಿರುವ ಅನುದಾನದಡಿ ಔಷಧಿಗಳನ್ನು ಖರೀದಿಸುವಂತೆ ಸೂಚನೆ ನೀಡಲಾಗುತ್ತಿದ್ರೂ, ಅನೇಕ ಆರೋಗ್ಯ ಸಂಸ್ಥೆಗಳಿಗೆ ಇದುವರೆಗೂ ಅನುದಾನವೇ ಬಿಡುಗಡೆಯಾಗಿಲ್ಲ ಎಂದು ಸಂಘ ಆರೋಪಿಸಿದೆ. ಇದರಿಂದ ಆರೋಗ್ಯ ಇಲಾಖೆಯ ಉದಾಸೀನತೆ ಮತ್ತು ಇಚ್ಛಾಶಕ್ತಿ ಕೊರತೆ ಸ್ಪಷ್ಟವಾಗುತ್ತಿದೆ ಎಂದು ಟೀಕಿಸಿದೆ.
ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆಗಳು ಬಡವರಲ್ಲಿ ಭರವಸೆ ಕಸಿದುಕೊಂಡಿದ್ದು, ಜೀವ ಉಳಿಸಿಕೊಳ್ಳಲು ಸಾಲ ಮಾಡಿಕೊಂಡು ಖಾಸಗಿ ಆಸ್ಪತ್ರೆಗಳತ್ತ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕಿದೆ ಎಂಬ ಆಗ್ರಹ ವ್ಯಕ್ತವಾಗಿದೆ.
Though government hospitals are often described as a lifeline for the poor, patients are increasingly facing serious difficulties. A severe shortage of medicines in government hospitals has disrupted treatment services, prompting the Government Medical Officers’ Association to openly express dissatisfaction with the state government.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm