ಬ್ರೇಕಿಂಗ್ ನ್ಯೂಸ್
13-02-26 10:41 am HK News Desk ಕರ್ನಾಟಕ
ಬೆಂಗಳೂರು, ಫೆ 12: ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯಾವರ ಬಳಿ ಘಟನೆ ನಡೆದಿದೆ. ಕಾರು, ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ನಲ್ಲಿದ್ದ ಬರ್ತಿದ್ದ ಸವಾರ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 7 ಮಂದಿಯ ಜೀವ ಹೋಗಿದೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಶವಗಳನ್ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
7 ಮಂದಿ ಪಾಲಿಗೆ ಯಮನಾದ ಕ್ಯಾಂಟರ್:
ಮೊದಲಿಗೆ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದಿದೆ ನಂತರ ಕ್ಯಾಂಟರ್ನ ಚಾರ್ಸಿ ಕಟ್ ಆಗಿದೆ. ಬಳಿಕ ಕ್ಯಾಂಟರ್ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಹಿನ್ನಲೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರೆಲ್ಲಾ ಕೊತ್ತನೂರು ಮೂಲದವರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಕೋಲಾರದಿಂದ ದೇವನಹಳ್ಳಿಗೆ ಪ್ರಯಾಣ ಬೆಳೆಸುತ್ತಿದ್ರು. ಪ್ರಾಥಮಿಕ ತನಿಖೆಯ ಪ್ರಕಾರ, ಎಕ್ಸ್ಯುವಿ 700 ಕಾರಿನಲ್ಲಿ ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳು ಜಾಲಿ ರೈಡ್ಗೆ ಬಂದಿದ್ದರು ಎನ್ನಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಎಕ್ಸ್ಯುವಿ 700 ಕಾರಿನಲ್ಲಿ ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳು ಜಾಲಿ ರೈಡ್ಗೆ ಬಂದಿದ್ದರು. ನೂತನ ಹೆದ್ದಾರಿಯಲ್ಲಿ ಅತಿವೇಗವಾಗಿ ಕಾರು ಚಲಾಯಿಸುತ್ತಿದ್ದಾಗ ಮೊದಲು ಗಗನ್ ಎಂಬವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ಚಾಲಕ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದ್ದಾನೆ.
ಸ್ಥಳಕ್ಕೆ ಭೇಟಿ ನೀಡಿದ ಐಜಿ ಲಾಭೂ ರಾಮ್ ಅವರು ಅಪಘಾತ ಸಂಬಂಧ ಮಾಹಿತಿ ನೀಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ನಡೆದಿದೆ. ಮೊದಲು ಟ್ಯಾಕ್ಸಿ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಆಗ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ. ಈಗಾಗಲೇ ಮೂರು ಜನರ ಮಾಹಿತಿ ಕಲೆ ಹಾಕಿದ್ದೇವೆ. ಉಳಿದವರ ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ತನಿಖೆ ಮುಂದುವರಿದಿದೆ ಎಂದಿದ್ದಾರೆ.
ಹೊಸಕೋಟೆ ತಾಲ್ಲೂಕಿನ ಎಂ.ಸತ್ಯಾವರ ಬಳಿ ನಡೆದಿದ್ದ ಅಪಘಾತದಲ್ಲಿ ಮೃತ ಬೈಕ್ ಸವಾರ ದೇವನಹಳ್ಳಿ ಮೂಲದ ಗಗನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಆರು ಜನರ ಪೈಕಿ ಪೊಲೀಸರು ಇಬ್ಬರ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಅಶ್ವಿನ್, ಕರಣ್ ಆಲಿ ಕಾರಿನಲ್ಲಿದ್ದ ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಉಳಿದ ಮೃತರ ಮಾಹಿತಿಯನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.
ಸ್ಥಳಕ್ಕೆ ಭೇಟಿ ಸೋಕೋ ಟೀಮ್ ಭೇಟಿ ನೀಡಿದ್ದು, ಘಟನೆಯ ಕುರಿತು ಎಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಮಾಹಿತಿ ಕಲೆ ಹಾಕುತ್ತಿದೆ.
ಇದೇ ವೇಳೆ, ಹೆದ್ದಾರಿಯ ವಿನ್ಯಾಸ ಮತ್ತು ನಿರ್ಮಾಣದ ಕುರಿತು ಸ್ಥಳೀಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾಧುಪ್ಪನಹಳ್ಳಿಯಿಂದ ಕಮಳಿಪುರ ಬ್ರಿಡ್ಜ್ ವರೆಗಿನ ರಸ್ತೆ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದೆ ಎಂದು ಆರೋಪಿಸಲಾಗಿದೆ. ಸರ್ವೀಸ್ ರಸ್ತೆಗಳು ಕನಿಷ್ಠ 18 ಅಡಿ ಅಗಲ ಇರಬೇಕಾದರೆ, ಇಲ್ಲಿ ಮೂರೂವರೆ ಅಥವಾ ಎರಡೂವರೆ ಅಡಿ ಮಾತ್ರ ಇರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. 2010ರಲ್ಲಿ ರೈತರು ಜಮೀನು ಬಿಟ್ಟುಕೊಟ್ಟಿದ್ದರೂ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.
ಆದಾಗ್ಯೂ, ಪೊಲೀಸ್ ಮೂಲಗಳ ಪ್ರಕಾರ ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಈ ಭೀಕರ ಸರಣಿ ಅಪಘಾತದ ಪ್ರಮುಖ ಕಾರಣವಾಗಿದೆ.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am