ಬ್ರೇಕಿಂಗ್ ನ್ಯೂಸ್
18-02-26 09:02 pm HK Desk ಕರ್ನಾಟಕ
ಬೆಂಗಳೂರು, ಫೆ.18: ವಿಧಾನಸಭೆ ಅಧಿವೇಶನದ ಬೆನ್ನಲ್ಲೇ ಮತ್ತೆ ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಭದ್ರತೆಯ ನೆಪವೊಡ್ಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಾಧ್ಯಮಗಳ ಚಲನವಲನಕ್ಕೆ ನಿಯಂತ್ರಣ ಹಾಕಲು ಸೂಚನೆ ನೀಡಿದೆ. ಇನ್ನು ಮುಂದೆ ನಿಗದಿತ ಸ್ಥಳದಲ್ಲೇ ಜನಪ್ರತಿನಿಧಿಗಳ ಪ್ರತಿಕ್ರಿಯೆ ಪಡೆಯಬೇಕು ಎಂಬ ನಿಯಮ ಜಾರಿಗೆ ತರಲು ಮುಂದಾಗಿದೆ.
ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಧಾನಸೌಧದ ಕಾರಿಡಾರ್‌ಗಳು, ಸಚಿವರ ಕೊಠಡಿಗಳ ಬಳಿ ಅಥವಾ ಮುಖ್ಯಮಂತ್ರಿಗಳ ಕಚೇರಿಯ ಹೊರಗೆ ತಕ್ಷಣದ ಪ್ರತಿಕ್ರಿಯೆ ಪಡೆಯುವ ಅವಕಾಶ ಇನ್ನು ಸಿಗುವುದಿಲ್ಲ. ಸರ್ಕಾರ ಒಂದು ಅಥವಾ ಎರಡು ಸ್ಥಳಗಳನ್ನು ಮಾತ್ರ ‘ಮೀಡಿಯಾ ಪಾಯಿಂಟ್’ ಎಂದು ಗುರುತಿಸಲಿದೆ.
ಇತ್ತೀಚೆಗೆ ವಿಧಾನಸೌಧದ ಹೈ-ಸೆಕ್ಯೂರಿಟಿ ವಲಯದಲ್ಲೇ 300 ಗ್ರಾಂ ಚಿನ್ನ ಕಳ್ಳತನವಾದ ಘಟನೆ ಭದ್ರತಾ ವೈಫಲ್ಯವನ್ನು ಬಹಿರಂಗಪಡಿಸಿತ್ತು. ಇದನ್ನ ಮರೆಮಾಚಲು ಈ ಕ್ರಮವೇ ಎಂಬ ಪ್ರಶ್ನೆ ಎದುರಾಗಿದೆ.
ವಿರೋಧ ಪಕ್ಷಗಳ ಕಿಡಿ;
ಕಾಂಗ್ರೆಸ್ ಪಕ್ಷದ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪತ್ರಕರ್ತರನ್ನು ಕಂಡರೆ ಕಾಂಗ್ರೆಸ್ ಸರ್ಕಾರಕ್ಕೆ ನಡುಕವೇ ಎಂಬ ಪ್ರಶ್ನೆಯನ್ನು ಜೆಡಿಎಸ್ ಮಾಡಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಕರ್ನಾಟಕದತ್ತ ಗಮನ ಹರಿಸಲಿ ಎಂದು ಟೀಕಿಸಿದ್ದಾರೆ.
ಇತ್ತ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಸರ್ಕಾರದ ಕ್ರಮವನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಕಿಡಿಕಾರಿದ್ದಾರೆ. ಸಚಿವರ ಕಚೇರಿಯಲ್ಲಿ ನಡೆದ ಕಳ್ಳತನದ ಬಳಿಕ ಮಾಧ್ಯಮಗಳ ಮೇಲೆ ನಿರ್ಬಂಧ ತರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಈ ನಡುವೆ ಸಚಿವ ಚಲುವರಾಯ ಸ್ವಾಮಿ ಪ್ರತಿಕ್ರಿಯೆ ನೀಡಿ, ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು ಮಾಧ್ಯಮಗಳಿಗೆ ಮುಕ್ತ ಅವಕಾಶ ಕಲ್ಪಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಒಟ್ನಲ್ಲಿ ವಿಧಾನಸೌಧದೊಳಗಿನ ಈ ಹೊಸ ನಿಯಮ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
The Karnataka government has moved to impose fresh restrictions on media movement inside Vidhana Soudha following the ongoing Assembly session, citing security concerns.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm