ಬ್ರೇಕಿಂಗ್ ನ್ಯೂಸ್
19-02-26 09:29 pm mangalore ಕರ್ನಾಟಕ
ಬೆಂಗಳೂರು, ಫೆ.19 ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದ ಹಿನ್ನೆಲೆಯಲ್ಲಿ ನೌಕರರ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆಯಲು ನಿರ್ಧರಿಸಿತು.
38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಬಾಕಿ ವೇತನ ನೀಡುವುದಾಗಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ ತೃಪ್ತಿ ತಂದಿಲ್ಲ. 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕೆಎಸ್ಆರ್ಟಿಸಿ ಎಂಡಿ, ನೌಕರರ ಜತೆ ಚರ್ಚಿಸಿದರು. ಬಳಿಕ ಅಂತಿಮವಾಗಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಸರ್ಕಾರಕ್ಕೆ ಮಾರ್ಚ್ 2ರ ಗಡುವು ನೀಡಿದ್ದು, ಮಾರ್ಚ್ 2ರೊಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೇ ಅರಸ್ ತಿಳಿಸಿದ್ದಾರೆ. ಆದ್ರೆ, ಇದಕ್ಕೆ ಸಾರಿಗೆ ನೌಕರರು ಆಕ್ಷೇಪ ವ್ಯಕ್ತಪಡಿಸಿದ್ದು, ಮುಷ್ಕರ ಮುಂದುವರಿಸುವಂತೆ ಆಗ್ರಹಿಸಿದ್ದಾರೆ. 38 ತಿಂಗಳ ಹಿಂದಿನ ಬಾಕಿ ಪೂರ್ತಿ ನೀಡಲೇಬೇಕು. ಅಲ್ಲದೆ, ವೇತನ ಪರಿಷ್ಕರಿಸಬೇಕು. ನಿರ್ಧಾರ ಕೈಗೊಳ್ಳಲು ಹತ್ತು ದಿನ ಸಮಯ ನೀಡಿದ್ದು, ಅಷ್ಟರಲ್ಲಿ ಆಗದೇ ಇದ್ದರೆ ಮಾರ್ಚ್ 02ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm