ಬ್ರೇಕಿಂಗ್ ನ್ಯೂಸ್
25-02-26 07:54 pm HK News Staffer ಕರ್ನಾಟಕ
ಚೆನ್ನೈ, ಫೆ.25: ವರನಟ ಡಾ. ರಾಜ್‌ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ 9 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಪ್ರಕರಣ ನಡೆದು ಬರೋಬ್ಬರಿ 25 ವರ್ಷಗಳ ಬಳಿಕ ಆರೋಪಿಗಳಿಗೆ ಅಂತಿಮವಾಗಿ ಮುಕ್ತಿ ಸಿಕ್ಕಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಪಿ. ವೇಲ್ಮುರುಗನ್ ಹಾಗೂ ಎಂ. ಜ್ಯೋತಿರಾಮನ್ ಅವರ ಪೀಠ ಬುಧವಾರ ತೀರ್ಪು ಪ್ರಕಟಿಸಿದೆ. ಈ ಹಿಂದೆ ಸೆಪ್ಟೆಂಬರ್ 25, 2018ರಂದು ಸೆಷನ್ಸ್ ನ್ಯಾಯಾಲಯ 9 ಮಂದಿಯನ್ನು ಖುಲಾಸೆಗೊಳಿಸಿತ್ತು. ಆ ತೀರ್ಪನ್ನು ಪ್ರಶ್ನಿಸಿ ಚೆನ್ನೈ ಪೊಲೀಸರು ಹೈಕೋರ್ಟ್ ಮೊರೆ ಹೋಗಿದ್ದರು.
ಸಾಕ್ಷ್ಯ ಕೊರತೆಯೇ ಕಾರಣ:
ಸೆಷನ್ಸ್ ನ್ಯಾಯಾಲಯವು ಪೊಲೀಸ್ ಇಲಾಖೆ ಸೂಕ್ತ ಪುರಾವೆ ಸಲ್ಲಿಸದಿರುವುದನ್ನು ಉಲ್ಲೇಖಿಸಿ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ರಾಜ್‌ಕುಮಾರ್ ಮತ್ತು ಅವರ ಪತ್ನಿ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸದಿರುವುದು, ಮಧ್ಯಸ್ಥಿಕೆದಾರರನ್ನು ಪ್ರಶ್ನಿಸದಿರುವುದು ಸೇರಿದಂತೆ ಹಲವು ಅಂಶಗಳನ್ನು ನ್ಯಾಯಾಲಯ ಗಮನಿಸಿದೆ. ಆರೋಪಿಗಳೆಂದು ಗುರುತಿಸಲ್ಪಟ್ಟಿದ್ದ ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸಾಮಿ, ಕಲ್ಮಂಡಿರಾಮನ್, ಮಾರನ್, ಸೆಲ್ವಂ, ಅಮೃತಲಿಂಗಂ ಹಾಗೂ ನಾಗರಾಜ್ ಸೇರಿದಂತೆ 9 ಮಂದಿಗೆ ಈಗ ಅಂತಿಮ ಮುಕ್ತಿ ಲಭಿಸಿದೆ.
108 ದಿನಗಳ ವನವಾಸ:
2000ರ ಜುಲೈ 30ರಂದು ಕರ್ನಾಟಕ-ತಮಿಳುನಾಡು ಗಡಿ ಭಾಗದ ಈರೋಡ್ ಜಿಲ್ಲೆಯ ತಲವಾಡಿ ಬಳಿಯ ದೊಡ್ಡ ಗಾಜನೂರು ತೋಟದ ಮನೆಯಿಂದ ರಾಜ್‌ಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ರಾಜ್‌ಕುಮಾರ್ ಅವರೊಂದಿಗೆ ಸಂಬಂಧಿಕರಾದ ಎಸ್.ಎ. ಗೋವಿಂದರಾಜ್, ನಾಗೇಶ್ ಮತ್ತು ಸಹಾಯಕ ನಿರ್ದೇಶಕ ನಾಗಪ್ಪ ಅವರನ್ನೂ ಅಪಹರಿಸಲಾಗಿತ್ತು. ನಾಗಪ್ಪ ಸೆಪ್ಟೆಂಬರ್ 28ರಂದು ಪಾರಾಗಿ ಬಂದಿದ್ದರು. ರಾಜ್‌ಕುಮಾರ್ ಸೇರಿದಂತೆ ಉಳಿದವರನ್ನು ವೀರಪ್ಪನ್ 108 ದಿನಗಳ ಬಳಿಕ ಬಿಡುಗಡೆ ಮಾಡಿದ್ದ. ರಾಜ್‌ಕುಮಾರ್ ಬಿಡುಗಡೆಗಾಗಿ ಕೋಟ್ಯಂತರ ರೂಪಾಯಿ ನೀಡಲಾಗಿದೆ ಎಂಬ ಆರೋಪಗಳ ಹಿನ್ನೆಲೆ 2001ರಲ್ಲಿ ಪ್ರಕರಣ ದಾಖಲಾಗಿತ್ತು.
ಎನ್‌ಕೌಂಟರ್‌ನಲ್ಲಿ ಅಂತ್ಯ:
2004ರ ಅಕ್ಟೋಬರ್ 18ರಂದು ತಮಿಳುನಾಡು ವಿಶೇಷ ಕಾರ್ಯಪಡೆ ನಡೆಸಿದ ‘ಆಪರೇಷನ್ ಕಕೂನ್’ ಎನ್‌ಕೌಂಟರ್‌ನಲ್ಲಿ ವೀರಪ್ಪನ್ ಮತ್ತು ಅವನ ಸಹಚರರಾದ ಸೇತುಕುಳಿ ಗೋವಿಂದನ್ ಹಾಗೂ ಚಂದ್ರೇಗೌಡ ಹತ್ಯೆಯಾಗಿದ್ದರು. ಪ್ರಕರಣದಲ್ಲಿ ಭಾಗಿಯಾಗಿದ್ದ ಮಲ್ಲು ಎಂಬಾತ ತನಿಖೆ ವೇಳೆ ಮೃತಪಟ್ಟಿದ್ದು, ರಮೇಶ್ ತಲೆಮರೆಸಿಕೊಂಡಿದ್ದನೆಂದು ದಾಖಲೆಗಳಲ್ಲಿ ಉಲ್ಲೇಖವಿದೆ.
ಉಳಿದ 9 ಮಂದಿ ಕಳೆದ ಹಲವು ವರ್ಷಗಳಿಂದ ಗೋಪಿಚೆಟ್ಟಿಪಾಳ್ಯಂ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದರು. ಇದೀಗ ಹೈಕೋರ್ಟ್ ತೀರ್ಪಿನಿಂದ ಅವರಿಗೆ ಆರೋಪದಿಂದ ಬಿಡುಗಡೆ ಲಭಿಸಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm