ಬ್ರೇಕಿಂಗ್ ನ್ಯೂಸ್
01-03-26 05:16 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮಾರ್ಚ್ 1: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಸುದ್ದಿಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಶಿಯಾ ಮುಸ್ಲಿಮರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಅಘೋಷಿತ ಬಂದ್ ಆಚರಿಸಿದ್ದಾರೆ. ಜೊತೆಗೆ ಮೂರು ದಿನ ಸ್ವಯಂಪ್ರೇರಿತ ‘ಕರಾಳ ದಿನ’ ಆಚರಿಸಲು ತೀರ್ಮಾನಿಸಿದ್ದಾರೆ.
ಬೆಳಗ್ಗಿನಿಂದಲೇ ನೂರಾರು ಗ್ರಾಮಸ್ಥರು ರಸ್ತೆಗಿಳಿದು ಖಮೇನಿ ಅವರ ಭಾವಚಿತ್ರಗಳನ್ನು ಹಿಡಿದು ಕಣ್ಣೀರು ಹಾಕಿ ಶೋಕಾಚರಣೆ ನಡೆಸಿದರು. ಇರಾನ್ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಂಜುಮನ್ ಎ ಜಾಫರಿಯಾ ಸಮಿತಿ ನೇತೃತ್ವದಲ್ಲಿ ಸಂಜೆ ವೇಳೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಅಲೀಪುರ–ಇರಾನ್ ಬಾಂಧವ್ಯ
ಅಲೀಪುರ ಗ್ರಾಮಕ್ಕೆ ಇರಾನ್ ಜೊತೆಗಿನ ಧಾರ್ಮಿಕ ಮತ್ತು ಭಾವನಾತ್ಮಕ ನಂಟು ದಶಕಗಳ ಇತಿಹಾಸ ಹೊಂದಿದೆ. 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅಲೀಪುರಕ್ಕೆ ಭೇಟಿ ನೀಡಿದ್ದರೆಂಬ ಮಾಹಿತಿ ಸ್ಥಳೀಯರಲ್ಲಿ ಇದೆ. ಅವರ ಗುರು ಅಯತೊಲ್ಲಾ ಇಮಾಮ್ ಖಮೇನಿ ಅವರ ಹೆಸರಿನಲ್ಲಿ ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣವಾಗಿದ್ದು, ಅದರ ಉದ್ಘಾಟನೆಗೂ ಅವರು ಆಗಮಿಸಿದ್ದರು ಎನ್ನಲಾಗುತ್ತದೆ.
ಈ ಹಿಂದೆ ‘ಬೆಳ್ಳಿಕುಂಟೆ’ ಎಂದು ಕರೆಯಲ್ಪಡುತ್ತಿದ್ದ ಗ್ರಾಮವು ಬಿಜಾಪುರದ ಆದಿಲ್‌ಶಾಹಿಗಳ ಕಾಲದಲ್ಲಿ ವಲಸೆ ಬಂದವರಿಂದ ‘ಅಲೀಪುರ’ವಾಗಿ ರೂಪಾಂತರಗೊಂಡಿತೆಂಬ ಐತಿಹಾಸಿಕ ಉಲ್ಲೇಖವೂ ಇದೆ. ಸುಮಾರು 20 ಸಾವಿರ ಜನಸಂಖ್ಯೆಯ ಈ ಗ್ರಾಮದಲ್ಲಿ ಶಿಯಾ ಮುಸ್ಲಿಮರದ್ದೇ ಪ್ರಾಬಲ್ಯವಿದೆ. ವೈದ್ಯಕೀಯ ಹಾಗೂ ಧಾರ್ಮಿಕ ಶಿಕ್ಷಣಕ್ಕಾಗಿ ಅನೇಕರು ಇರಾನ್ ಅವಲಂಬಿಸಿಕೊಂಡಿದ್ದು, ಕೆಲವರು ಅಲ್ಲಿ ನೆಲೆಸಿದ್ದಾರೆ.
ಗ್ರಾಮದಲ್ಲಿರುವ ‘ಅಲಿ ಟಿವಿ’ ಮೂಲಕ ಖಮೇನಿ ಅವರ ಧಾರ್ಮಿಕ ಪ್ರವಚನಗಳು ಪ್ರಸಾರವಾಗುತ್ತಿದ್ದು, ಅವರ ಧಾರ್ಮಿಕ ಆದೇಶಗಳನ್ನು ಪಾಲಿಸುವ ದೊಡ್ಡ ಸಮುದಾಯವೇ ಇಲ್ಲಿದೆ. ಇರಾನ್‌ನಲ್ಲಿ ಯುದ್ಧ ಸಂಭವಿಸಿದಾಗಲೆಲ್ಲಾ ಅಲೀಪುರ ನಿವಾಸಿಗಳಲ್ಲಿ ಆತಂಕ ಮನೆ ಮಾಡುವುದು ಸಾಮಾನ್ಯ. ಸದ್ಯ ಖಮೇನಿ ಅವರ ಸಾವಿನ ಸುದ್ದಿಯಿಂದ ಗ್ರಾಮವೇ ಮೌನಕ್ಕೆ ಜಾರಿದ್ದು, ಭಾರೀ ಶೋಕ ವಾತಾವರಣ ಆವರಿಸಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm