ಬ್ರೇಕಿಂಗ್ ನ್ಯೂಸ್
02-03-26 09:19 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 02: ಹೊಸ ಶಿಕ್ಷಣ ನೀತಿ ಜಾರಿಗೆ ಅನುಗುಣವಾಗಿ 2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 6 ವರ್ಷ ವಯೋಮಿತಿ ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿಗದಿತ ವಯಸ್ಸು ಪೂರೈಸದ ಮಕ್ಕಳ ಪೋಷಕರು ಬೆಂಗಳೂರಿನಲ್ಲಿ ಸೇರಿ 90 ದಿನಗಳ ಸಡಿಲಿಕೆ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
‘ಯುಕೆಜಿ ಮುಗಿದಿದೆ, 1ನೇ ತರಗತಿಗೆ ದಾರಿ ಬಿಡಿ’, ‘ಸಮಯ ವ್ಯರ್ಥ ಮಾಡಬೇಡಿ, ಕಲಿಕೆಗೆ ಅವಕಾಶ ಕೊಡಿ’, ‘ಶಿಕ್ಷಣ ನಮ್ಮ ಹಕ್ಕು, ವಯಸ್ಸು ಅಡ್ಡಿಯಾಗಬಾರದು’ ಎಂಬ ಘೋಷಣೆಗಳಿರುವ ಪ್ಲೇ ಕಾರ್ಡ್ಗಳನ್ನು ಹಿಡಿದು ಪೋಷಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
“ಇದು ಪ್ರತಿಭಟನೆ ಅಲ್ಲ, ಮನವಿ”
ಒಬ್ಬ ಪೋಷಕರ ಪ್ರಕಾರ, ಇದು ಸರ್ಕಾರ ವಿರೋಧಿ ಪ್ರತಿಭಟನೆ ಅಲ್ಲ; ಮನವಿ ಮಾತ್ರ. “ಮೂರು ವರ್ಷಗಳ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದ ಮಕ್ಕಳನ್ನು ಪ್ರಥಮ ತರಗತಿಗೆ ದಾಖಲಿಸಬೇಕು. ಆದರೆ ಹೊಸ ಶಿಕ್ಷಣ ನೀತಿಯ ಪ್ರಕಾರ 6 ವರ್ಷ ವಯೋಮಿತಿ ಪೂರೈಸದ ಕಾರಣ ನಮ್ಮ ಮಕ್ಕಳಿಗೆ ಪ್ರವೇಶ ಸಿಗುತ್ತಿಲ್ಲ. ಈಗಿರುವ ತರಗತಿಯನ್ನು ಮತ್ತೆ ಕಲಿಸುವುದು ಮಕ್ಕಳಿಗೆ ಮಾನಸಿಕ ಒತ್ತಡ ಉಂಟುಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.
ಪೋಷಕರು ಕಳೆದ ಎರಡು ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಕೋವಿಡ್ ಅವಧಿಯಲ್ಲಿ ಹುಟ್ಟಿದ ಮಕ್ಕಳು ಈಗಾಗಲೇ ಭಾವನಾತ್ಮಕ ಮತ್ತು ಮಾನಸಿಕ ಒತ್ತಡ ಅನುಭವಿಸಿದ್ದು, ಮತ್ತೊಮ್ಮೆ ತರಗತಿ ಮರುಕಳಿಸುವುದು ಅವರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕ ವ್ಯಕ್ತವಾಗಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಮಕ್ಕಳು ಈ ಆದೇಶದಿಂದ ತೊಂದರೆಗೆ ಸಿಲುಕಿರುವುದಾಗಿ ಪೋಷಕರು ಹೇಳಿದ್ದು, ದಾಖಲಾತಿ ವಿಚಾರದಲ್ಲಿ 90 ದಿನಗಳ ವಯೋಮಿತಿ ಸಡಿಲಿಕೆ ನೀಡಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಏನಿದು ಸರ್ಕಾರದ ಆದೇಶ?
2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ ಜೂನ್ 1ರ ವೇಳೆಗೆ 6 ವರ್ಷ ಪೂರ್ಣಗೊಂಡಿರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ ಕನಿಷ್ಠ ವಯೋಮಿತಿಯನ್ನು 6 ವರ್ಷಗಳೆಂದು ನಿಗದಿಪಡಿಸಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm