ಬ್ರೇಕಿಂಗ್ ನ್ಯೂಸ್
06-03-26 12:08 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 06 : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಕರ್ನಾಟಕ ಸರ್ಕಾರ ಕೈಗೊಂಡಿದೆ. 2026–27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದು, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮತ್ತು ಡಿಜಿಟಲ್ ವ್ಯಸನದಿಂದ ಮಕ್ಕಳ ಆರೋಗ್ಯ, ಮಾನಸಿಕ ಸ್ಥಿತಿ ಹಾಗೂ ಸಾಮಾಜಿಕ ಜೀವನದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳ ದುರುಪಯೋಗದಿಂದ ಮಕ್ಕಳ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತಿರುವುದನ್ನು ಗಮನದಲ್ಲಿಟ್ಟು ಈ ಕುರಿತು ಸರ್ಕಾರ ಹಲವು ಹಂತಗಳಲ್ಲಿ ಚರ್ಚೆ ನಡೆಸಿತ್ತು. ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿ, ಮಕ್ಕಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ವ್ಯಸನ ಆತಂಕಕಾರಿ ಮಟ್ಟಕ್ಕೆ ತಲುಪಿದೆ ಎಂದು ಎಚ್ಚರಿಕೆ ನೀಡಿದ್ದರು. ಇದೇ ಹಿನ್ನೆಲೆಯಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ವಯಸ್ಸಿನ ಆಧಾರಿತ ನಿರ್ಬಂಧ ತರಬೇಕೆಂಬ ಅಭಿಪ್ರಾಯ ವ್ಯಕ್ತವಾಗಿತ್ತು.
ಇದೇ ರೀತಿಯ ಕ್ರಮಗಳನ್ನು ವಿಶ್ವದ ಹಲವು ದೇಶಗಳು ಕೈಗೊಂಡಿರುವುದನ್ನೂ ಸರ್ಕಾರ ಗಮನಕ್ಕೆ ತೆಗೆದುಕೊಂಡಿದೆ. ಫಿನ್ಲ್ಯಾಂಡ್ ಈಗಾಗಲೇ ಮಕ್ಕಳ ಡಿಜಿಟಲ್ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದು, ಬ್ರಿಟನ್ ಈ ಕುರಿತು ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಕೂಡ ಇತ್ತೀಚೆಗೆ ಅಪ್ರಾಪ್ತರಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ವಿಧಿಸುವ ನಿರ್ಧಾರ ಪ್ರಕಟಿಸಿದೆ. ಈ ಮಾದರಿಗಳನ್ನು ಅಧ್ಯಯನ ಮಾಡಿ ಕರ್ನಾಟಕದಲ್ಲಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಮತ್ತು ‘ಬಿಯಾಂಡ್ ಸ್ಕ್ರೀನ್ಸ್’ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಜವಾಬ್ದಾರಿಯುತ ಡಿಜಿಟಲ್ ಬಳಕೆಯ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತಿದೆ.
2025–26ರ ಆರ್ಥಿಕ ಸಮೀಕ್ಷೆಯಲ್ಲಿಯೂ ವಯಸ್ಸಿನ ಆಧಾರಿತ ನಿರ್ಬಂಧದ ಅಗತ್ಯತೆಯನ್ನು ಶಿಫಾರಸು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ 2026–27ರ ಬಜೆಟ್ನಲ್ಲಿ ಅಧಿಕೃತವಾಗಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧ ಹೇರಲಾಗುವುದು ಎಂದು ಸರ್ಕಾರ ಘೋಷಿಸಿದೆ. ಇದರ ಮೂಲಕ ಅಪ್ರಾಪ್ತ ಮಕ್ಕಳನ್ನು ಸಾಮಾಜಿಕ ಜಾಲತಾಣಗಳ ದುರುಪಯೋಗದಿಂದ ದೂರವಿಟ್ಟು ಅವರ ಆರೋಗ್ಯಕರ ಬೆಳವಣಿಗೆ ಮತ್ತು ಭವಿಷ್ಯವನ್ನು ಕಾಪಾಡುವ ಉದ್ದೇಶ ಹೊಂದಿದೆ.
ಇದೇ ವೇಳೆ ಶಾಲಾ–ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳು, ಕಟ್ಟುನಿಟ್ಟಿನ ನಿಯಮಗಳು ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿ ಬಜೆಟ್ನಲ್ಲಿ ಹಲವು ಘೋಷಣೆಗಳನ್ನೂ ಮಾಡಲಾಗಿದೆ. 1ರಿಂದ 10ನೇ ತರಗತಿ ವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಹೊಸ ತರಗತಿ ಕೊಠಡಿಗಳ ನಿರ್ಮಾಣ ಹಾಗೂ ದುರಸ್ತಿಗೆ 565 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಶಾಲೆಗಳಲ್ಲಿನ ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ರೂ. ಹಾಗೂ ಪೀಠೋಪಕರಣ ಖರೀದಿಗೆ 25 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm