ಬ್ರೇಕಿಂಗ್ ನ್ಯೂಸ್
08-03-26 07:51 pm HK News Staffer ಕರ್ನಾಟಕ
ಕಲಬುರಗಿ ಜಿಲ್ಲೆ , ಮಾ 08: 'ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಸರ್ವಾಧಿಕಾರಿ. ಎಫ್ಸ್ಟೀನ್ ಫೈಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದರಿಂದ ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮರಾಗಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರವಿ ಇಟ್ಟಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ₹ 1069 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಬೆಳಿಗ್ಗೆ ಚಹಾ ಕುಡಿಯವ ಸಮಯಕ್ಕೆ ಟ್ರಂಪ್ ಅವರೊಂದಿಗೆ ಮಾತನಾಡುವುದಾಗಿ ಮೋದಿ ಹೇಳುತ್ತಾರೆ. ಅಷ್ಟೊಂದು ಸ್ನೇಹ ಇದ್ದರೆ ನಮ್ಮ ದೇಶದ ಮೇಲೆ ಇಷ್ಟೊಂದು ಪ್ರಮಾಣದಲ್ಲಿ ತೆರಿಗೆ ಹೇರುತ್ತಿರುವುದೇಕೆ ? ಯಾವ ದೇಶದೊಂದಿಗೆ ವ್ಯವಹಾರ ಮಾಡಬೇಕು ಎಂದು ಹೇಳುತ್ತಿರುವುದೇಕೆ ? ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಲು ಮೋದಿ ಅವರಿಗೆ ಏಕೆ ಆಗುವುದಿಲ್ಲ' ಎಂದು ಪ್ರಶ್ನಿಸಿದರು.
ಭಾರತದ ಆಹ್ವಾನದ ಮೇರೆಗೆ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ ನೌಕಾಸೇನಾ ತಾಲೀಮಿನಲ್ಲಿ ಭಾಗವಹಿಸಲು ಇರಾನ್ನಿಂದ ಬಂದಿದ್ದ ಯುದ್ಧನೌಕೆಯನ್ನು ಅಮೆರಿಕದ ಜಲಾಂತರ್ಗಾಮಿಯು ಬಾಂಬ್ ದಾಳಿ ನಡೆಸಿ ಮುಳುಗಿಸಿ ಹಲವಾರು ಇರಾನ್ ಸೈನಿಕರ ಸಾವಿಗೆ ಕಾರಣವಾಗಿದೆ. ಅಷ್ಟೊಂದು ಧೈರ್ಯ ಅವರಿಗೆ ಹೇಗೆ ಬಂತು? ಇದನ್ನು ಪ್ರಶ್ನಿಸುವ ಎದೆಗಾರಿಕೆಯೂ ದೇಶದ ಪ್ರಧಾನಿಗೆ ಇಲ್ಲವೇ? ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದ ವೇಳೆ ಬಾಂಗ್ಲಾ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವ ವೇಳೆ ಅಮೆರಿಕದ ಯುದ್ಧನೌಕೆಯನ್ನು ಕಳುಹಿಸಿ ಭಾರತವನ್ನು ಬೆದರಿಸಲು ನೋಡಿತು. ಆದರೆ, ಇಂದಿರಾಗಾಂಧಿ ಅವರು ಅಮೆರಿಕದ ಬೆದರಿಕೆಗೆ ಮಣಿಯಲಿಲ್ಲ. ಆದರೆ, ಮೋದಿ ಏಕೆ ಅಮೆರಿಕದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ' ಎಂದು ಟೀಕಿಸಿದರು.
ನರೇಂದ್ರ ಮೋದಿ ತಮ್ಮ ವಿದೇಶಾಂಗ ನೀತಿಯಿಂದಾಗಿ ದೇಶವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾಳುಮಾಡುತ್ತಿದ್ದಾರೆ. ಜವಾಹರ ಲಾಲ್ ನೆಹರು ಪ್ರಧಾನಿಯಾಗಿದ್ದಾಗ ಆಲಿಪ್ತ ನೀತಿಯನ್ನು ಅನುಸರಿಸಿದ್ದರಿಂದ ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು? ಮೋದಿ ಇಸ್ರೇಲ್ಗೆ ಹೋಗಿ ಕೊರಳಲ್ಲಿ ಒಂದು ಬಿಲ್ಲೆ ಹಾಕಿಕೊಂಡು ಬಂದ ನಂತರ ಇಸ್ರೇಲ್ ಇರಾನ್ ಮೇಲೆ ಬಾಂಬ್ ಹಾಕಿತು. ದೇಶದ ಮಖ್ಯಸ್ಥ ಖಮೇನಿ ಅವರನ್ನು ಅಮೆರಿಕ-ಇಸ್ರೇಲ್ ಪಡೆಗಳು ಹತ್ಯೆ ಮಾಡಿದವು. ಒಂದು ದೇಶದ ಮುಖ್ಯಸ್ಥನನ್ನು ಹತ್ಯೆ ಮಾಡಿದರೆ ಆ ದೇಶ ಶಾಂತಿಯಿಂದ ಇರುತ್ತದೆಯೇ? ಇದು ವಿಶ್ವ ಶಾಂತಿಯಿಂದ ಇರಲು ಸಾಧ್ಯವಾಗುತ್ತದೆಯಾ? ಎಂದು ಖರ್ಗೆ ಪ್ರಶ್ನಿಸಿದರು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm