ಬ್ರೇಕಿಂಗ್ ನ್ಯೂಸ್
09-03-26 04:17 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 9: ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿವಿ ನೆಟ್ಟಗಾಗಿಸಿದ್ದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿ ಕುತೂಹಲ ಮೂಡಿಸಿದ್ದಾರೆ.
ಭಾನುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿ ತೆರಳಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ದಿಲ್ಲಿಗೆ ತೆರಳುತ್ತಿರುವುದಾಗಿ ಡಿ.ಕೆ.ಶಿವಕುಮಾರ್ ಕಚೇರಿ ಮಾಹಿತಿ ನೀಡಿದೆ. ಆದರೆ ವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಬೇಕಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕಾದರೆ ‘ಸಮರ್ಥ ನಾಯಕತ್ವ ಬೇಕು’ ಎಂಬ ಬೇಡಿಕೆಯನ್ನು ಡಿ.ಕೆ.ಶಿವಕುಮಾರ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಶಿವಕುಮಾರ್ ಅವರಿಗೆ ನಿಷ್ಠರಾಗಿರುವ ಕೆಲವು ಶಾಸಕರು, ವಿಧಾನಸಭೆಯ ಬಜೆಟ್ ಅಧಿವೇಶನದ ನಂತರ ತಮ್ಮ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಲು ದೆಹಲಿಗೆ ಪ್ರಯಾಣಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಲಿದೆ.
ಏತನ್ಮಧ್ಯೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಶಿವಕುಮಾರ್ ಅವರು ಮಾರ್ಚ್ 10 ರಂದು ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ಎಂಎಲ್‌ಸಿಗಳಿಗೆ ಭೋಜನ ಕೂಟವನ್ನು ಆಯೋಜಿಸಿದ್ದಾರೆ. ಭೋಜನ ಕೂಟವನ್ನು ಎಲ್ಲ ಶಾಸಕರ ವಿಶ್ವಾಸ ಗಳಿಸುವುದಕ್ಕಾಗಿ ಏರ್ಪಡಿಸಿದ್ದಾರೆಂದು ಹೇಳಲಾಗುತ್ತಿದ್ದರೂ ಅದೇ ಸಮಯದಲ್ಲಿ ಡಿಕೆ ದೆಹಲಿಗೆ ದೌಡಾಯಿಸಿ ಅಚ್ಚರಿ ಮೂಡಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm