ಬ್ರೇಕಿಂಗ್ ನ್ಯೂಸ್
09-03-26 09:51 pm HK News Staffer ಕರ್ನಾಟಕ
ಕಲಬುರಗಿ, ಮಾರ್ಚ್ 09: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ಭೀಕರ ದುರ್ಘಟನೆ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಮಹಿಳೆಯ ಎರಡೂ ಕಾಲುಗಳು ಕಟ್ ಆಗಿದ್ದು ಸದ್ಯ ಮಹಿಳೆ ಆಸ್ಪತ್ರೆಯ ತುರ್ತು ನಿಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಗೊಂಡ ಮಹಿಳೆಯನ್ನು ಅರಳಗುಂಡಗಿ ಗ್ರಾಮದ ನಿವಾಸಿ ನಾಗಮ್ಮ ಎಂದು ಗುರುತಿಸಲಾಗಿದೆ. ಅರಳಗುಂಡಗಿ ಗ್ರಾಮವು ಶರಣಬಸವೇಶ್ವರರ ಜನ್ಮಸ್ಥಳವಾಗಿರುವುದರಿಂದ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಜಾತ್ರೆಯ ಅಂಗವಾಗಿ ಶನಿವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ರಥೋತ್ಸವ ಆರಂಭವಾಗಿತ್ತು.
ರಥೋತ್ಸವ ಸಂದರ್ಭದಲ್ಲಿ ಭಕ್ತರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ರಥವನ್ನು ಎಳೆಯಲು ಮುಂದಾಗಿದ್ದರು. ಆದರೆ ಸ್ಥಳದಲ್ಲಿ ಜನಸಮೂಹ ಹೆಚ್ಚಾಗಿದ್ದ ಕಾರಣ ರಥವು ಏಕಾಏಕಿ ನಿಯಂತ್ರಣ ತಪ್ಪಿ ಜನರು ನಿಂತಿದ್ದ ದಿಕ್ಕಿನತ್ತ ಚಲಿಸಲು ಆರಂಭಿಸಿದೆ.
ಈ ವೇಳೆ ರಥದ ಸಮೀಪದಲ್ಲಿದ್ದ ನಾಗಮ್ಮ ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗದೆ ರಥದ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ರಥದ ಚಕ್ರವು ಅವರ ಕಾಲಿನ ಮೇಲೆ ಹರಿದು ಗಂಭೀರ ಗಾಯಗಳಾಗಿವೆ. ಘಟನೆಯ ನಂತರ ಸ್ಥಳದಲ್ಲಿದ್ದ ಜನರು ತಕ್ಷಣವೇ ಮಹಿಳೆಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ನಾಗಮ್ಮ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm