ಬ್ರೇಕಿಂಗ್ ನ್ಯೂಸ್
11-03-26 06:14 pm HK News Staffer ಕರ್ನಾಟಕ
ಹುಬ್ಬಳ್ಳಿ, ಮಾರ್ಚ್ 11: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದ ಬೇಸರದಲ್ಲಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತನಗಾದ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ.
ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಪಕ್ಷ ನೀಡಿದ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಟಿಕೆಟ್ ಸಿಗುವುದೆಂಬ ಆಕಾಂಕ್ಷೆ ಇತ್ತು. ಪಕ್ಷ ಟಿಕೆಟ್ ನೀಡದ ಕಾರಣ ನೋವಾಗಿದೆ ಎಂದು ಭಾವುಕರಾಗಿದ್ದಾರೆ.
ಬೇರೆ ಪಕ್ಷದಿಂದ ಬಂದ ಎಸ್.ವಿ.ಸಂಕನೂರ ಅವರಿಗೆ ಟಿಕೆಟ್ ನೀಡಲಾಗಿದೆ. ಪಕ್ಷದಲ್ಲಿ ದೀರ್ಘ ಕಾಲದಿಂದ ಕಾರ್ಯಕರ್ತನಾಗಿದ್ದ ನನಗೆ ಟಿಕೆಟ್ ನೀಡಿಲ್ಲ. ಅವರಿಗೆ ನೀಡಿರುವ ಟಿಕೆಟ್ ಬದಲಿಸಿ ನನಗೆ ಟಿಕೆಟ್ ನೀಡಲು ಇನ್ನೂ ಸಮಯ ಇದೆ. ಎಂಟು ದಿನಗಳಲ್ಲಿ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡದಿದ್ದರೆ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದರು.
ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ರಾಜ್ಯದಲ್ಲಿ ಪಕ್ಷ ಬೆಳೆಯದಿರುವುದಕ್ಕೆ ಇದೇ ಕಾರಣ. ಹುಬ್ಬಳ್ಳಿ-ಧಾರವಾಡದಲ್ಲಿ ಪರ್ಯಾಯ ರಾಜಕೀಯ ಶಕ್ತಿ ಬೆಳೆಯಬಾರದು ಎಂದು ನನಗೆ ಟಿಕೆಟ್ ತಪ್ಪಿಸಿರುವ ಸಾಧ್ಯತೆ ಇದೆ. ನನ್ನ ವಿರುದ್ಧ ಕೆಲವರು ಪಿತ್ತೂರಿ ಮಾಡಿದ್ದಾರೆ ಎಂದು ಪಾಟೀಲ ಆರೋಪಿಸಿದರು. ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಬೇರೆ ಪಕ್ಷದಿಂದ ಬಂದಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಸಂಕನೂರ ಸ್ಪರ್ಧಿಸಿದ್ದಾಗ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಈ ಬಾರಿ ಮತ್ತೆ ಟಿಕೆಟ್ ಕೇಳಿದ್ದು ಅವರಿಗೆ ಟಿಕೆಟ್ ನೀಡಬಾರದು ಎಂಬುದು ಬಹುತೇಕರ ಅಭಿಪ್ರಾಯವಾಗಿತ್ತು. ಆದರೂ ಸಹ ಪಕ್ಷ ಸಂಕನೂರ ಅವರಿಗೆ ಟಿಕೆಟ್ ನೀಡಿರುವುದು ಹೆಚ್ಚಿನ ಕಾರ್ಯಕರ್ತರಿಗೂ ನೋವಾಗಿದೆ ಎಂದರು.
ಪಕ್ಷ ನನಗೆ ಮಾಡಿದ ಅನ್ಯಾಯ ಇಡೀ ಬಿಜೆಪಿ ಕಾರ್ಯಕರ್ತರಿಗೆ ಮಾಡಿದ ಅನ್ಯಾಯವಾಗಿದೆ. ಪಕ್ಷ ನನಗೆ ತಾಯಿ ಇದ್ದಂತೆ. ಪಕ್ಷ ಬಿಡುವುದಿಲ್ಲ. ಆದರೆ, ಪಕ್ಷದಲ್ಲಿ ನನ್ನ ಕಾರ್ಯವೈಖರಿ ಬದಲಾಗಲಿದೆ ಎಂದು ಹೇಳಿದರು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm