ಬ್ರೇಕಿಂಗ್ ನ್ಯೂಸ್
18-03-26 07:13 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 18: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿ, ಬಿಜೆಪಿ ಹಾಗೂ ವಿವಿಧ ಸಮುದಾಯ ಸಂಘಟನೆಗಳಿಗೆ ಸೇರಿದ ಒಟ್ಟು 15 ಮಂದಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಹಲವು ಪ್ರಮುಖರ ಹೆಸರುಗಳು ಸೇರಿವೆ.
ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.
ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ನೂರ್ ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು, ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್, ಜಾವೀದ್ ಖುರೇಶಿ, ಮೊಹಮ್ಮದ್ ಫಾಜಿಲ್ ಸೇರಿದಂತೆ ಇತರರ ಹೆಸರುಗಳೂ ಪಟ್ಟಿಯಲ್ಲಿ ಸೇರಿವೆ. ಮೂಡಿಗೆರೆ ಕೌಶಿಕ್ ಗೂ ನೋಟಿಸ್ ಜಾರಿ ಮಾಡಲಾಗಿದೆ.
ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಕೆಲ ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಪಟ್ಟಿಯಲ್ಲಿ ಸೇರಿಸಲಾಗಿದೆ. ಪೊಲೀಸ್ ಇಲಾಖೆಯ ಶಿಫಾರಸ್ಸನ್ನು ಪರಿಗಣಿಸಿರುವ ಉಪ ವಿಭಾಗಾಧಿಕಾರಿ ಅವರು ಈ ಕುರಿತು ವಿಚಾರಣೆ ನಡೆಸಲಿದ್ದು, ವಿಚಾರಣೆಯಲ್ಲಿ ಆರೋಪಿಗಳು ಅಥವಾ ಅವರ ಪರ ವಕೀಲರಿಗೆ ತಮ್ಮ ವಾದ ಮಂಡಿಸಲು ಅವಕಾಶ ನೀಡಲಾಗುತ್ತದೆ.
ವಿಚಾರಣೆಯ ಬಳಿಕ, ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ಅಂತಿಮವಾಗಿ ಗಡಿಪಾರು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm