ಬ್ರೇಕಿಂಗ್ ನ್ಯೂಸ್
26-03-26 11:14 am HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 26: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಾರ್ಕಪುರಂ ಸಮೀಪದಲ್ಲಿ ಮಾಯಾವರಂ ಎಂಬಲ್ಲಿ ಖಾಸಗಿ ಬಸ್ ಮತ್ತು ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು 13 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಭೀಕರ ಸಾವಿಗೀಡಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದು ಇದರಿಂದಾಗಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ತೆಲಂಗಾಣದ ಜಗಿತ್ಯಾಲ್‌ನಿಂದ ನೆಲ್ಲೂರು ಜಿಲ್ಲೆಯ ಕಲಿಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಒಟ್ಟು 41 ಪ್ರಯಾಣಿಕರಿದ್ದರು. ಇಂದು ಬೆಳಗ್ಗೆ 5.30ರಿಂದ 6 ಗಂಟೆ ನಡುವೆ ಮಾರ್ಕಪುರಂ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಟಿಪ್ಪರ್ ಟ್ರಕ್‌ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಬೆನ್ನಲ್ಲೇ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಆವರಿಸಿದೆ. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ದು 10 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಒಟ್ಟು 25 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಕೂಡಲೇ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮತ್ತು ಅಪಘಾತದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತದೇಹಗಳ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿ. ಹರ್ಷವರ್ಧನ್ ರಾಜು ತಿಳಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಕಳೆದೊಂದು ವರ್ಷದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳಾಗಿದ್ದು ಒಟ್ಟು 8200 ಜೀವ ಹಾನಿಯಾದ ಅಪಘಾತಗಳಾಗಿವೆ ಎಂದು ಪೊಲೀಸರ ಅಂಕಿ ಸಂಖ್ಯೆಗಳು ತಿಳಿಸುತ್ತವೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm