ಬ್ರೇಕಿಂಗ್ ನ್ಯೂಸ್
26-03-26 09:21 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 26: ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪದ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದ್ದು, ಅಸಭ್ಯ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಮಾರ್ಚ್ 25ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋದಲ್ಲಿ ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡುವ ಜೊತೆಗೆ ಬ್ಯಾಚ್ ವಿದ್ಯಾರ್ಥಿಗಳಿಗೆ ಚಾಕೊಲೇಟ್ ಹಂಚುವ ಬಗ್ಗೆ ಹೇಳಿರುವುದು ಕಂಡುಬಂದಿದೆ.
ಘಟನೆಯ ಬಳಿಕ, ವಿದ್ಯಾರ್ಥಿನಿ ಈ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಾಂಶುಪಾಲರ ಬಳಿ ತೆರಳುವುದಾಗಿ ಹೇಳಿದ್ದಾಳೆ. ಈ ವೇಳೆ, “ನೀನೇ ಮೊದಲು ಪ್ರಪೋಸ್ ಮಾಡಿದ್ದೆ” ಎಂದು ಪ್ರಾಧ್ಯಾಪಕ ಹೇಳಿರುವುದು ಹಾಗೂ ಸಿಸಿಟಿವಿ ದೃಶ್ಯಗಳ ಬಗ್ಗೆ ಉಲ್ಲೇಖಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ವಿದ್ಯಾರ್ಥಿನಿ ಅದನ್ನು ತಳ್ಳಿಹಾಕಿ ಸಿಸಿಟಿವಿ ದೃಶ್ಯ ತೋರಿಸಲು ಒತ್ತಾಯಿಸಿದಾಗ, “ನಾಳೆ ಮಾತನಾಡೋಣ” ಎಂದು ಪ್ರಾಧ್ಯಾಪಕ ಹೇಳಿ ಸ್ಥಳದಿಂದ ಹೊರಟಿರುವುದು ಕೂಡ ದೃಶ್ಯಗಳಲ್ಲಿ ಕಂಡುಬಂದಿದೆ.
ಈ ಘಟನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿ ಹಾಗೂ ಸಹಪಾಠಿಗಳು ತರಗತಿಯಿಂದ ಹೊರಬಂದ ಬಳಿಕ ಪ್ರಾಧ್ಯಾಪಕನನ್ನು ಸುತ್ತುವರೆದು ಪ್ರಶ್ನಿಸಿದ್ದು, ಈ ವೇಳೆ ತುಸು ಗಲಾಟೆ ನಡೆದಿದೆ. ಅಲ್ಲದೆ ಪ್ರಾಧ್ಯಾಪಕನ ಮೇಲೆ ನಲ್ಲೆ ನಡೆದಿದ್ದು ಈ ವೇಳೆ ಪ್ರಾಧ್ಯಾಪಕ ಎಸ್ಕೇಪ್ ಆಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ ಘಟನೆ ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಕುರಿತಾಗಿ ಗಂಭೀರ ಚರ್ಚೆಗೆ ಕಾರಣವಾಗಿದೆ. ತರಗತಿ ಕೊಠಡಿಯಂತಹ ಶೈಕ್ಷಣಿಕ ವಾತಾವರಣದಲ್ಲಿ ನಡೆದ ಈ ರೀತಿಯ ಘಟನೆ ಸಮಾಜದಲ್ಲಿ ಆತಂಕವನ್ನು ಹುಟ್ಟಿಸಿದ್ದು, ಕಾಲೇಜುಗಳಲ್ಲಿ ನೈತಿಕತೆ ಮತ್ತು ಭದ್ರತಾ ಮಾನದಂಡಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.
An incident at Siddhartha Medical College in T. Beguru village of Nelamangala taluk has sparked major unrest, leading to a tense situation on campus.
— Hate Detector 🔍 (@HateDetectors) March 26, 2026
The college is owned by Karnataka Home Minister Dr. G. Parameshwara, and the episode has triggered intense public debate.… https://t.co/80mXUGmMtU pic.twitter.com/VBqXiFVMN5
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm