ಬ್ರೇಕಿಂಗ್ ನ್ಯೂಸ್
01-04-26 10:51 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 1 : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕೈಚೀಲ ಖರೀದಿ ಅವ್ಯವಹಾರ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಪರಿಸರ ಸ್ನೇಹಿ ಕೈಚೀಲಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲು ಮನವಿ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಪೂರ್ವಾನುಮತಿ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ವಕೀಲ ಎನ್.ಆರ್. ರವಿಚಂದ್ರೇಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ನಾಲ್ಕು ವಾರಗಳೊಳಗೆ ಪೂರ್ವಾನುಮತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ. ಭ್ರಷ್ಟಾಚಾರದ ಆರೋಪ ಎದುರಾದಾಗ ತನಿಖೆ ಅನಿವಾರ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ ಬಟ್ಟೆಯ ಕೈಚೀಲ ಬಳಕೆಯನ್ನು ಉತ್ತೇಜಿಸಲು ನಿರ್ದೇಶನ ನೀಡಲಾಗಿತ್ತು. ಆದರೆ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಚೀಲದ ಬೆಲೆ ಸುಮಾರು 13 ರೂಪಾಯಿ ಇದ್ದರೂ, ಅದೇ ಚೀಲಗಳನ್ನು ಪ್ರತಿ ಚೀಲಕ್ಕೆ 52 ರೂಪಾಯಿ ನೀಡಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ನಿರ್ಧಾರದಿಂದ ಸರ್ಕಾರದ ಖಜಾನೆಗೆ ಸುಮಾರು 7.65 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕಲ್ಯಾಣ ಯೋಜನೆಗಳಿಗೆ ಮೀಸಲಾದ ಹಣವನ್ನು ಕೈಚೀಲ ಖರೀದಿಗೆ ಬಳಸಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಗರಸಭೆ ಮತ್ತು ಪುರಸಭೆಗಳ ಪೂರ್ವಾನುಮತಿ ಇಲ್ಲದೇ ದುಬಾರಿ ದರದಲ್ಲಿ ಖರೀದಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ 2021ರ ಅಕ್ಟೋಬರ್ 13ರಂದು ಮೈಸೂರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರಡಿ ದೂರು ನೀಡಲಾಗಿದ್ದು, ಇದೀಗ ಹೈಕೋರ್ಟ್ ಆದೇಶದೊಂದಿಗೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm