ಬ್ರೇಕಿಂಗ್ ನ್ಯೂಸ್
02-04-26 07:44 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 2: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆ ಉಪ ನಾಯಕ ಸ್ಥಾನದಿಂದ ತೆಗೆದು ಹಾಕಲಾಗಿದೆ. ಚಡ್ಡಾ ಸ್ಥಾನಕ್ಕೆ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮತ್ತು ಪಕ್ಷದ ಸಂಸದ ಡಾ. ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಪಕ್ಷ ನೇಮಕ ಮಾಡಿದೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಾರ್ವಜನಿಕ ವಿಚಾರಗಳನ್ನು ಪ್ರಸ್ತಾಪಿಸಿ ದೇಶದ ಗಮನಸೆಳೆದಿದ್ದ ರಾಘವ್ ಚಡ್ಡಾ ಅವರನ್ನು ದಿಢೀರ್ ಬೆಳವಣಿಗೆಯಲ್ಲಿ ಉಪ ನಾಯಕ ಹುದ್ದೆಯಿಂದ ವಜಾಗೊಳಿಸಿದ್ದು ಪಕ್ಷದೊಳಗಿನ ಪ್ರಮುಖ ಬದಲಾವಣೆ ಎಂದು ಹೇಳಲಾಗುತ್ತಿದೆ. ಅಬಕಾರಿ ನೀತಿ ವಿಷಯದಲ್ಲಿ ಪಕ್ಷದ ಉನ್ನತ ನಾಯಕರು ಇತ್ತೀಚೆಗೆ ದೋಷಮುಕ್ತರಾಗಿದ್ದರೂ, ಛಡ್ಡಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿಯೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಛಡ್ಡಾ ಅವರ ಮೌನ ಪಕ್ಷದ ನಾಯಕರ ನಡುವಿನ ಬಿರುಕು ಎಂಬ ಮಾತು ಕೇಳಿಬಂದಿತ್ತು.
ಪಕ್ಷದ ರಾಜ್ಯಸಭೆ ಉಪ ನಾಯಕರಾಗಿ ಆಯ್ಕೆಯಾದ ಡಾ. ಅಶೋಕ್ ಕುಮಾರ್ ಮಿತ್ತಲ್, ಶಿಕ್ಷಣ ಕ್ಷೇತ್ರದ ಹಿನ್ನೆಲೆ ಹೊಂದಿರುವ ಅನುಭವಿಯಾಗಿದ್ದು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಹಿಂದಿನ ಸಂಸತ್ ಅಧಿವೇಶನಗಳಲ್ಲಿ, ಕೃಷಿ ಮತ್ತು ಶಿಕ್ಷಣದಂತಹ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಪಕ್ಷದ ಮೂಲಗಳ ಪ್ರಕಾರ, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನಿಗದಿಪಡಿಸದಂತೆ ಎಎಪಿ ರಾಜ್ಯಸಭಾ ಕಾರ್ಯದರ್ಶಿಯನ್ನು ಕೇಳಿದೆ. ಇದಲ್ಲದೆ, ಸಂಸದ ರಾಘವ್ ಚಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಮಿತ್ತಲ್ ಅವರನ್ನು ಪಕ್ಷದ ರಾಜ್ಯಸಭಾ ಉಪ ನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರವನ್ನು ಸಲ್ಲಿಸಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm