ಬ್ರೇಕಿಂಗ್ ನ್ಯೂಸ್
02-04-26 09:31 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 02: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತು ಅವರ ಕುಟುಂಬದ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣವು ರಾಜಿ ಸಂಧಾನ ಹಂತಕ್ಕೆ ಬಂದು ನಿಂತಿದೆ. ಹೈಕೋರ್ಟ್ ನ್ಯಾಯಾಧೀಶರ ಸಲಹೆಯಂತೆ ಇಬ್ಬರ ಪರ ವಕೀಲರು ರಾಜಿ ಮಾತುಕತೆಗೆ ಒಪ್ಪಿದ್ದು, ಮಧ್ಯಸ್ಥಿಕೆದಾರರ ನೇಮಕ ಮತ್ತು ಸಭೆ ದಿನಾಂಕವನ್ನು ಏಪ್ರಿಲ್ 30ಕ್ಕೆ ನಿಗದಿ ಮಾಡಲಾಗಿದೆ.
ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡಿರುವುದಾಗಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕ ಸುರೇಶ್ ಬಾಬು ಕೆಲವೊಂದು ಆರೋಪಗಳನ್ನು ಚಂದ್ರಶೇಖರ್ ವಿರುದ್ಧ ಮಾಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಈ ಬಗ್ಗೆ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ತಮ್ಮ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಬೆದರಿಕೆ ಹಾಕುತ್ತಿರುವುದಾಗಿ ಆರೋಪಿಸಿದ್ದರು. ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್ 223 ಮತ್ತು 224 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಕುಮಾರಸ್ವಾಮಿ ಕಡೆಯಿಂದ ಹೈಕೋರ್ಟ್ ಮೆಟ್ಟಿಲೇರಿದ್ದಲ್ಲದೆ, ತಮ್ಮ ಮೇಲಿನ ಪ್ರಕರಣವನ್ನು ರದ್ದುಪಡಿಸಲು ಕೇಳಿಕೊಂಡಿದ್ದರು.
ಪ್ರಕರಣವನ್ನು ಪರಿಶೀಲಿಸಿದ ಹೈಕೋರ್ಟ್ ನ್ಯಾಯಾಧೀಶರು, ಇಬ್ಬರ ಪ್ರತಿಷ್ಠೆಯ ಕಾರಣಕ್ಕೆ ನೀಡಿರುವ ದೂರು ಎಂದು ಪರಿಗಣಿಸಿ ರಾಜಿ ಸಂಧಾನದ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದರು. ಈಗ ಎರಡೂ ಕಡೆಯ ವಕೀಲರು ರಾಜಿ ಸಂಧಾನ ಮಾತುಕತೆಗೆ ಸಮ್ಮತಿಸಿದ್ದು, ಹೈಕೋರ್ಟ್ ರಾಜಿ ಸಂಧಾನಕ್ಕೆ ಏಪ್ರಿಲ್ 30ಕ್ಕೆ ದಿನಾಂಕ ಫಿಕ್ಸ್ ಮಾಡಿದೆ. ವಿವಾದವು ರಾಜ್ಯದ ಗಮನ ಸೆಳೆದಿದ್ದು, ರಾಜಕಾರಣಿಗಳು ಮತ್ತು ಐಪಿಎಸ್ ಅಧಿಕಾರಿ ನಡುವಿನ ಜಟಾಪಟಿ ನಗೆಪಾಟಲಿಗೆ ಕಾರಣವಾಗಿತ್ತು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm