ಬ್ರೇಕಿಂಗ್ ನ್ಯೂಸ್
08-04-26 08:44 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 08: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮತ್ತು ಬ್ಲಾಕ್ಮೇಲ್ ಆರೋಪ ಹೊರಿಸಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಆದರೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಆ ಮಹಿಳೆಯೇ ನಿಗೂಢವಾಗಿ ನಾಪತ್ತೆಯಾಗಿರುವುದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಸಾದ ಕೊಡುವ ನೆಪದಲ್ಲಿ ಸ್ವಾಮೀಜಿ ಮಹಿಳೆಯನ್ನು ಮಠಕ್ಕೆ ಕರೆಸಿ ಅಸಭ್ಯವಾಗಿ ವರ್ತಿಸಿದ್ದು, ಅದರ ವಿಡಿಯೋ ಮಾಡಿಕೊಂಡು ರಾತ್ರಿ ಸಮಯದಲ್ಲಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆ ಪೊಲೀಸರು ಅಧಿಕೃತ ದೂರು ಪಡೆಯಲು ಮುಂದಾದಾಗ, ಮಹಿಳೆ ಸಂಪರ್ಕಕ್ಕೆ ಸಿಗದೇ ಇದ್ದು, ಫೋನ್ ಸ್ವಿಚ್ಡ್ ಆಫ್ ಆಗಿದೆ. ಮನೆಯಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಗೊಂದಲಕ್ಕೆ ತಳ್ಳಲ್ಪಟ್ಟಿದೆ.
ಇದಕ್ಕೂ ಮಧ್ಯೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಮಹಿಳೆ ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡು ಬಳಿಕ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು, ಮಂಡ್ಯ, ವಿಜಯಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಮಹಿಳೆಯ ನಾಪತ್ತೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಸ್ವಾಮೀಜಿ ದೂರಿಗೆ ಭಯಪಟ್ಟು ತಲೆಮರೆಸಿಕೊಂಡಿರಬಹುದೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಇದಲ್ಲದೆ, ಸ್ವಾಮೀಜಿಯದ್ದೆಂದು ಹೇಳಲಾಗುತ್ತಿರುವ ಕೆಲವು ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ತಂದಿದೆ. ಒಂದು ಕಡೆ ಮಹಿಳೆಯ ಲೈಂಗಿಕ ದೌರ್ಜನ್ಯ ಆರೋಪ, ಮತ್ತೊಂದೆಡೆ ಸ್ವಾಮೀಜಿಯ ಹನಿಟ್ರ್ಯಾಪ್ ಪ್ರತಿದೂರು ಇವೆರಡರ ನಡುವೆ ನಿಜಾಂಶವೇನು ಎಂಬುದು ಪೊಲೀಸರ ತನಿಖೆಯಿಂದಲೇ ಹೊರಬರಬೇಕಾಗಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm