ಬ್ರೇಕಿಂಗ್ ನ್ಯೂಸ್
09-04-26 03:37 pm HK News Staffer ಕರ್ನಾಟಕ
ಮಡಿಕೇರಿ, ಎಪ್ರಿಲ್ 9: ಚಾರಣ ಬಂದು ದಿಢೀರ್ ನಾಪತ್ತೆಯಾಗಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ಪ್ರಕರಣ ರಾಜಕೀಯ ಆಯಾಮ ಪಡೆದಿದ್ದು ಬಿಜೆಪಿ ನಾಯಕರು ನಕ್ಸಲ್ ಆರೋಪದ ಲಿಂಕ್ ಮಾಡಿದ್ದಾರೆ. ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಅನುಮಾನಗಳಿಗೆ ಎಡೆಮಾಡಿದ್ದು, 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಪ್ರಮುಖರು ಆರೋಪ ಮಾಡಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಯುವತಿ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು.
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಶೋಧ ನಡೆಸಿದರೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶರಣ್ಯ ಒಂದು ವೇಳೆ ನಾಟಕ ಮಾಡಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.
ಕೊಡಗು ಎಸ್ಪಿ ಬಿಂದು ಮಣಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm