ಬ್ರೇಕಿಂಗ್ ನ್ಯೂಸ್
09-04-26 04:33 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 9: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದ್ದು, ಇದರ ಬೆನ್ನಲ್ಲೇ ಆಯೋಗದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪ ಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ಆದರೆ, ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳು. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ.
ಬಿಜೆಪಿ ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿದೆ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು “ಬಿಟ್ಟಿ ಭಾಗ್ಯ” ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ.
ಈ ವಿಚಾರವಾಗಿ ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿ ಅನುಮಾನಸ್ಪದ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಮತದಾರರಿಗೆ ನೇರವಾಗಿ ಯೋಜನೆಗಳ ಲಾಭವನ್ನು ವರ್ಗಾವಣೆ ಮಾಡಲಾಗಿದೆ. ಅವೆಲ್ಲವೂ ಬಹಿರಂಗವಾಗಿ ನಡೆದಿವೆ. ಆದರೂ ಚುನಾವಣಾ ಆಯೋಗ ಮೌನ ವಹಿಸಿತ್ತು, ಯಾವುದೇ ಪರಿಶೀಲನೆಗೆ ಒಳಪಡಿಸದೆ ಯೋಜನೆಗಳನ್ನು ಮುಂದುವರಿಸಲು ಅನುಮತಿ ನೀಡಿತ್ತು.
ಇದು ನಿಷ್ಪಕ್ಷಪಾತ ನಡೆಯಲ್ಲ, ಇದು ಒಂದು ಪಕ್ಷಕ್ಕೆ ನೀಡಿದ ಸಹಕಾರವಾಗಿದೆ. ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿರುತ್ತದೆ. ಆದರೆ, ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಕೇವಲ ರಾಜಕೀಯ ಎಂದೆನಿಸುವುದಿಲ್ಲ – ಇದು ಬಡವರ ವಿರುದ್ಧ, ಮಹಿಳೆಯರ ವಿರುದ್ಧ ಮತ್ತು ಕರ್ನಾಟಕದ ವಿರುದ್ಧದ ಪರೋಕ್ಷ ದಾಳಿಯಾಗಿದೆ. ನುಡಿದಂತೆ ನಡೆವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸರ್ಕಾರವು ಚುನಾವಣಾ ಆಯೋಗದ ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗದೆ ತಾನು ಕೊಟ್ಟ ಭರವಸೆಗಳನ್ನು ಪೂರೈಸುವಲ್ಲಿ ಬದ್ಧವಾಗಿರುತ್ತದೆ ಮತ್ತು ಪ್ರತಿ ಕನ್ನಡಿಗನ ಸೇವೆಯನ್ನು ಎಂದಿನಂತೆ ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm