ಬ್ರೇಕಿಂಗ್ ನ್ಯೂಸ್
10-04-26 03:25 pm HK News Desk ಕರ್ನಾಟಕ
ಚಿಕ್ಕಮಗಳೂರು, ಎಪ್ರಿಲ್ 10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ಪ್ರವಾಸಿಗರ ತಂಡದಿಂದ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (14) ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಮಾಣಿಕ್ಯಧಾರಾ ಬಳಿಯ ಅತ್ಯಂತ ಕಡಿದಾದ ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ.
ಏಪ್ರಿಲ್ 7ರಂದು ಕೇರಳದಿಂದ 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಶ್ರೀನಂದಾ, ದತ್ತಪೀಠ ಹಾಗೂ ಮಾಣಿಕ್ಯಧಾರಾ ದರ್ಶನದ ಬಳಿಕ ಹಠಾತ್ತಾಗಿ ನಾಪತ್ತೆಯಾಗಿದ್ದರು. ಬಾಲಕಿಯ ಪತ್ತೆಗಾಗಿ ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎಎನ್‌ಎಫ್ ತಂಡಗಳು ಜಂಟಿಯಾಗಿ ಬೃಹತ್ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯದ ನಡುವೆ ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾಗಳನ್ನು ಬಳಸಿ ಶೋಧ ನಡೆಸಲಾಗಿತ್ತು.
ಶುಕ್ರವಾರ ಮಧ್ಯಾಹ್ನದ ವೇಳೆ ಪ್ರಪಾತದ ತಳಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು, ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೋ, ಬೇರೇನಾದರೂ ಕೈವಾಡ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಷ್ಟೆ. ಮಗಳ ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರವಾಸಿ ತಾಣದಲ್ಲಿ ಶೋಕದ ಛಾಯೆ ಆವರಿಸಿದೆ. ಎರಡು ದಿನವಾದರೂ ಮಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ತಾಯಿ, ಮಗಳು ಎಲ್ಲಿಯೂ ಬಿದ್ದಿರಲಿಕ್ಕಿಲ್ಲ. ಯಾವುದೋ ಅಮಲು ಪದಾರ್ಥ ಕೊಟ್ಟು ಅಪಹರಿಸಿರುವ ಶಂಕೆ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಬಾಲಕಿಯ ಶವ ಆಳ ಪ್ರತಾಪದಲ್ಲಿ ಕಂಡುಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
A 14-year-old girl from Kerala, who had gone missing during a tourist trip three days ago, was found dead near Manikyadhara Falls in the Chandradrona hill ranges on Friday. The deceased has been identified as Sreenanda, a native of Palakkad, Kerala. Her body was recovered from a steep gorge nearly 2,000 feet deep near the falls.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm