ಬ್ರೇಕಿಂಗ್ ನ್ಯೂಸ್
10-04-26 06:53 pm HK News Desk ಕರ್ನಾಟಕ
ಬಳ್ಳಾರಿ, ಎಪ್ರಿಲ್ 10: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ (ಶೇ. 80.1)ಯಲ್ಲಿ ಪಾಸ್ ಆಗುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾನೆ.
ಬೆಂಗಳೂರು ಮೂಲದ ಎಸ್.ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು ಕಳೆದ 7 ವರ್ಷಗಳಿಂದ ಬಳ್ಳಾರಿ ಜೈಲಿನಲ್ಲಿದ್ದಾನೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಂಗಿತ ವ್ಯಕ್ತಪಡಿಸಿದ್ದ. ಇದಕ್ಕೆ ಸಹಕರಿಸಿದ ಜೈಲಿನ ಅಧಿಕಾರಿಗಳು ದೂರ ಶಿಕ್ಷಣದ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇತಿಹಾಸದಲ್ಲಿ 94, ಅರ್ಥಶಾಸ್ತ್ರದಲ್ಲಿ 84 ಮತ್ತು ಕನ್ನಡದಲ್ಲಿ 82 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಲಿನಲ್ಲಿ ಗಮನ ಸೆಳೆದಿದ್ದಾನೆ.
ಅಶೋಕ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರೂ ಜೈಲು ಸೆಲ್ ನಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಿದ್ದ. ಹೀಗಾಗಿ ಖಾಸಗಿಯಾಗಿ ಪರೀಕ್ಷೆ ಬರೆದು ಇದೀಗ ಫಸ್ಟ್ ಕ್ಲಾಸ್ನಲ್ಲಿ ಪಾಸಾಗಿದ್ದಾನೆ. ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣದ ಬಗ್ಗೆ ಆಸಕ್ತಿ ತೋರಿದಲ್ಲಿ ಅದಕ್ಕೂ ಅವಕಾಶ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ ಕೈದಿಗಳಲ್ಲಿ ಒಬ್ಬರಾದ ಅಶೋಕ್, ಪಿಯುಸಿ ಪರೀಕ್ಷೆಯಲ್ಲಿ 80.1% ಅಂಕಗಳನ್ನು ಪಡೆದಿರುವುದು ಹೃದಯಸ್ಪರ್ಶಿಯಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಜೈಲು ಅಧಿಕಾರಿಗಳ ಬೆಂಗಾವಲಿನೊಂದಿಗೆ ಪರೀಕ್ಷೆಗೆ ಹಾಜರಾಗಿದ್ದರು. ಮುಂದಿನ ಉತ್ತಮ ಭವಿಷ್ಯದ ಬಗೆಗಿನ ಅವರ ಭರವಸೆಯನ್ನು ಜೈಲಿನ ಗೋಡೆಗಳು ಇನ್ನೂ ಹುಸಿಗೊಳಿಸಿಲ್ಲ ಎಂಬುದನ್ನು ಕಂಡು ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm