ಬ್ರೇಕಿಂಗ್ ನ್ಯೂಸ್
14-04-26 02:04 pm HK News Staffer ಕರ್ನಾಟಕ
ಬೆಂಗಳೂರು, ಏ 14: ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಯಾಗಿದೆ.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ (ಏಪ್ರಿಲ್ 13) ನಜೀರ್ ಅಹ್ಮದ್ ಅವರಿಗೆ ರಾಜೀನಾಮೆ ನೀಡಲು ಗಡುವು ನೀಡಿದ್ದರು. ನಿಗದಿತ ಅವಧಿಯೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ವಜಾಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಒಳಭಿನ್ನತೆಗಳು ಬಹಿರಂಗವಾಗಿದ್ದು, ಅದರ ಪರಿಣಾಮವಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾದ ಗೊಂದಲದ ನಡುವೆ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಸಲೀಂ ಅಹ್ಮದ್ ಪತ್ರಿಕಾಗೋಷ್ಠಿ ನಡೆಸಿ ಗಂಭೀರ ಆರೋಪಗಳನ್ನು ಮಾಡಿದ್ದರು.
ಈ ಬೆಳವಣಿಗೆಯ ನಂತರ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಳಿಕ ಆ ಘಟಕವನ್ನೇ ವಿಸರ್ಜಿಸಲಾಗಿದೆ.
ನಜೀರ್ ಅಹ್ಮದ್ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಆಪ್ತರಾಗಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಂಟಾದ ಬಂಡಾಯವನ್ನು ಶಮನ ಮಾಡುವ ಜವಾಬ್ದಾರಿಯನ್ನೂ ಅವರಿಗೆ ನೀಡಲಾಗಿತ್ತು. ಆದರೆ, ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ.
ವಿಶೇಷವಾಗಿ ಸಾದಿಕ್ ಪೈಲ್ವಾನ್ ಬಂಡಾಯ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವಲ್ಲಿ ಹಿಂದೇಟು ಹಾಕಿದರೆಂಬ ಮಾಹಿತಿ ಲಭ್ಯವಾಗಿದ್ದು, ಪ್ರಚಾರ ಕಾರ್ಯದಲ್ಲೂ ದೂರ ಉಳಿದಿದ್ದರು ಎನ್ನಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಪಕ್ಷದ ಹೈಕಮಾಂಡ್ ಕಠಿಣ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm