ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ

31-07-20 11:24 am       Bangalore Correspondent   ಕರ್ನಾಟಕ

1990ರ ಬ್ಯಾಚ್‌ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್‌ ಪಂತ್ ಮೂಲತಃ ಉತ್ತರಾಂಚಲದ ಪಿತೋರ್​ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್ ‌ಪಂತ್ ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಕರಿಸಲಿದ್ದಾರೆ.

ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್​ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್‌ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್‌ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್‌ ಪಂತ್ ಮೂಲತಃ ಉತ್ತರಾಂಚಲದ ಪಿತೋರ್​ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್‌ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.

ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್​ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್​ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ‌ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್​ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.

ಆ. 1ಕ್ಕೆ ಭಾಸ್ಕರ್ ರಾವ್​ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂತ್ ಮತ್ತು ಸುನಿಲ್ ಅಗರ್​ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ.