ಬ್ರೇಕಿಂಗ್ ನ್ಯೂಸ್
16-04-26 10:30 pm HK News Staffer ಕರ್ನಾಟಕ
ಬೆಂಗಳೂರು, ಏ 16: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು. ಅಲ್ಲದೇ ಪ್ರಮುಖವಾಗಿ ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm