ಬ್ರೇಕಿಂಗ್ ನ್ಯೂಸ್
17-04-26 01:39 pm HK News Staffer ಕರ್ನಾಟಕ
ಯಾದಗಿರಿ, ಏಪ್ರಿಲ್ 17: ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿರುವ ಘಟನೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ VRL ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಎಲ್ಲ ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ಪರಿಣಾಮ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳೆಂದು ಗುರುತಿಸಲಾಗಿದೆ. ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಹಾಗೂ 12 ವರ್ಷದ ಮಗು ಸೇರಿದ್ದಾರೆ.
ಈ ದುರ್ಘಟನೆಯಿಂದ ಎರಡು ಜಿಲ್ಲೆಗಳಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



ಬಸ್ನಲ್ಲಿದ್ದ ಹಲವರಿಗೆ ಗಂಭೀರ ಗಾಯ;
ಇನ್ನು, ಅಪಘಾತದ ತೀವ್ರತೆ ಬಸ್ ಗೂ ಬೆಂಕಿ ವ್ಯಾಪಿಸಿದ್ದು, ಅಲ್ಲಿದ್ದ ಸ್ಥಳೀಯರು ತಕ್ಷಣವೇ ಕಾರಿನಲ್ಲಿದ್ದವರ ರಕ್ಷಣೆಗೆ ಧಾವಿಸಿದ್ದು, ಕಾರಿನ ಜಖಂಗೊಂಡಿದ್ದ ಪರಿಣಾಮ ಕಾರಿನ ಡೋರ್ ತೆರೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ಬಳಿಕ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದಾದ ಬಳಿಕ ಕಾರಿನಲ್ಲಿ ಸುಟ್ಟುಕರಕಲಾದ ಮೃತದೇಹಗಳನ್ನು ಹೊರತೆಗೆದು ಅವರ ಗುರುತನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇನ್ನು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಒಂದು ಕ್ಷಣದ ಅಜಾಗರೂಕತೆ ಅಥವಾ ವಿಧಿಯ ಆಟ, ಕ್ಷಣಾರ್ಧದಲ್ಲಿ ಆರು ಜೀವಗಳನ್ನು ಕಸಿದುಕೊಂಡ ದಾರುಣ ಘಟನೆ ಇದು. ಕುಟುಂಬದೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದವರು ಮನೆಗೆ ಮರಳುವ ದಾರಿಯಲ್ಲೇ ದುರಂತಕ್ಕೆ ಬಲಿಯಾದುದು ಹೃದಯವಿದ್ರಾವಕ. ರಸ್ತೆ ಸುರಕ್ಷತೆಯ ಮಹತ್ವವನ್ನು ಮರುಮರು ನೆನಪಿಸುವ ಈ ಘಟನೆ, ಒಂದು ತಪ್ಪು ನಿರ್ಧಾರವೇ ಎಷ್ಟು ಜೀವಗಳನ್ನು ಕತ್ತಲೆಗೆ ತಳ್ಳಬಹುದು ಎಂಬುದನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm