ಬ್ರೇಕಿಂಗ್ ನ್ಯೂಸ್
23-04-26 01:36 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದ ವಿದ್ಯಾರ್ಥಿಗಳು ಹಿಂದಿಗಿಂತ ಹೆಚ್ಚು ಪಾಸ್ ಆಗಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದು ಈ ಬಾರಿ ಒಟ್ಟು 94.10 ಶೇ. ಮಂದಿ ತೇರ್ಗಡೆಯಾಗಿದ್ದಾರೆ.
ಈ ಬಾರಿ ಪರೀಕ್ಷೆ ಬರೆದಿದ್ದ ಒಟ್ಟು 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಂದಿ ಉತ್ತೀರ್ಣರಾಗಿದ್ದು, ಒಟ್ಟು ಪಾಸ್ ಪ್ರಮಾಣ ಶೇ.94.1ಕ್ಕೆ ಏರಿಕೆಯಾಗಿದೆ. ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ರಾಜ್ಯಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ.98.40 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ (98.18%) ದ್ವಿತೀಯ ಹಾಗೂ ಉತ್ತರ ಕನ್ನಡ (98.09%) ತೃತೀಯ ಸ್ಥಾನ ಗಳಿಸಿವೆ. ಹಾಸನ, ಮಂಡ್ಯ, ಹಾವೇರಿ ಸೇರಿದಂತೆ ಅನೇಕ ಜಿಲ್ಲೆಗಳು 95% ಮೇಲ್ಪಟ್ಟ ಫಲಿತಾಂಶ ಸಾಧಿಸಿ ಗಮನ ಸೆಳೆದಿವೆ. ಕಲಬುರಗಿ ಜಿಲ್ಲೆಯೂ ಫಲಿತಾಂಶ ಹೆಚ್ಚಿಸಿಕೊಂಡಿದ್ದು ಶೇ.85.06 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಈ ಬಾರಿ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಅಸಾಧಾರಣ ಸಾಧನೆ ಮಾಡಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಹಾಗೂ ರಾಯಚೂರಿನ ಸುಖದೇವ್ ಈ ಸಾಧನೆ ಮಾಡಿದವರು.
ಕಳೆದ 2024-25ನೇ ಸಾಲಿನಲ್ಲಿ 80.04 ಶೇ. ಫಲಿತಾಂಶ ಬಂದಿದ್ದರೆ, ಈ ಬಾರಿ 94.1 ಶೇ. ಫಲಿತಾಂಶ ಬಂದಿದೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದು, 96.18 ಶೇ. ಪಾಸ್ ಆಗಿದ್ದು ಬಾಲಕರು 91.94 ಶೇ. ಮಂದಿ ಪಾಸ್ ಆಗಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ 93.97 ಶೇ. ಫಲಿತಾಂಶ ಆಗಿದ್ದರೆ, ಅನುದಾನಿತ ಶಾಲೆಗಳಲ್ಲಿ 92.44 ಶೇ. ಮತ್ತು ಅನುದಾನ ರಹಿತ ಶಾಲೆಗಳಲ್ಲಿ 95.40 ಶೇ. ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಪ್ರಥಮ ಭಾಷೆಯಲ್ಲಿ 97.24 ಶೇ., ದ್ವಿತೀಯ ಭಾಷೆಯಲ್ಲಿ 98.13 ಶೇ., ತೃತೀಯ ಭಾಷೆಯಲ್ಲಿ 98.55 ಶೇ. ಮಂದಿ ತೇರ್ಗಡೆಯಾಗಿದ್ದಾರೆ. ಗಣಿತ 97.98, ವಿಜ್ಞಾನ 97.80, ಸಮಾಜ ವಿಜ್ಞಾನ 97.85 ಶೇ. ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 625ಕ್ಕೆ 625 ಅಂಕವನ್ನು ಏಳು, 624 ಅಂಕ -21 ಮಂದಿ, 623-28 ಮಂದಿ, 622 -74 ಮಂದಿ, 621-98 ಮಂದಿ, 620 ಅಂಕಗಳೊಂದಿಗೆ 150 ಮಂದಿ ಪಾಸ್ ಆಗಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm