ಬ್ರೇಕಿಂಗ್ ನ್ಯೂಸ್
24-04-26 02:35 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 24: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ಮೇಲಿನ ಕ್ರಮದ ವಿಚಾರದಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ತೀವ್ರಗೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ನಂತರ ಪಕ್ಷದೊಳಗೆ ಭಿನ್ನಾಭಿಪ್ರಾಯ ಹೆಚ್ಚಿದ್ದು, ಇಬ್ಬರು ಮುಸ್ಲಿಂ ನಾಯಕರ ವಿರುದ್ಧ ಕೈಗೊಂಡ ಶಿಸ್ತಿನ ಕ್ರಮ ಅಸಮಾಧಾನಕ್ಕೆ ಕಾರಣವಾಗಿದೆ. ಫಲಿತಾಂಶ ಬರುವುದಕ್ಕು ಮುನ್ನ ತೆಗೆದುಕೊಂಡ ಈ ಕ್ರಮಕ್ಕೆ ಪಕ್ಷದ ಕೆಲವು ಪ್ರಮುಖ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, “ಈ ರೀತಿಯ ಕ್ರಮಗಳು ಪಕ್ಷದ ಅಲ್ಪಸಂಖ್ಯಾತ ಬೆಂಬಲದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ” ಎಂದು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ, ಜಮೀರ್ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು, ಪಕ್ಷದ ಒಳಜಗಳವನ್ನು ನಿಯಂತ್ರಿಸಲು ನಡೆದ ಪ್ರಯತ್ನವೋ, ಪಕ್ಷದ ಕ್ರಮದ ವಿಚಾರದಲ್ಲಿ ನಡೆಸಿರುವ ಸಮಾಲೋಚನೆಯೋ ಎಂಬ ಬಗ್ಗೆ ಚರ್ಚೆ ನಡೆದಿದೆ.
ಇತ್ತೀಚೆಗೆ, ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ತುರ್ತು ಕ್ರಮ ಕೈಗೊಳ್ಳುವ ಬದಲು ಶೋಕಾಸ್ ನೋಟಿಸ್ ನೀಡಿ ಕ್ರಮಕ್ಕೆ ಮುಂದಾಗಬೇಕಿತ್ತು ಎಂದು ಜಾರಕಿಹೊಳಿ, ಡಿಕೆಶಿಗೆ ಸಲಹೆ ಮಾಡಿದ್ದರು. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಮತ್ತು ಜಾರಕಿಹೊಳಿ ಭೇಟಿಯಾಗಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ. ಉಪ ಚುನಾವಣೆಯ ವೇಳೆ ನಡೆದ ಘಟನೆಗಳ ಹಿನ್ನೆಲೆ, ಆರೋಪಗಳು, ಶಿಸ್ತಿನ ಕ್ರಮ ಕೈಗೊಳ್ಳುವ ಅಗತ್ಯತೆ ಮತ್ತು ಅದರ ಪರಿಣಾಮಗಳು ಸೇರಿದಂತೆ ಹಲವು ಅಂಶಗಳನ್ನು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಆದರೆ, ಪಕ್ಷದ ಕೆಲ ಹಿರಿಯ ನಾಯಕರು ಈ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ವಿಶೇಷವಾಗಿ ಅಲ್ಪಸಂಖ್ಯಾತರ ಬೆಂಬಲವೇ ಪ್ರಮುಖವಾಗಿರುವ ಕ್ಷೇತ್ರಗಳಲ್ಲಿ ಈ ರೀತಿಯ ಕ್ರಮಗಳನ್ನು ಎಚ್ಚರಿಕೆಯಿಂದ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ಇಂತಹ ಬೆಳವಣಿಗೆಗಳಿಂದ ಕಾಂಗ್ರೆಸ್ ಪಕ್ಷದೊಳಗೆ ಎರಡು ವಿಭಿನ್ನ ಧೋರಣೆಗಳು ಸ್ಪಷ್ಟವಾಗುತ್ತಿವೆ. ಒಂದು ವಲಯ ಶಿಸ್ತಿನ ಕಠಿಣ ಅನುಷ್ಠಾನವನ್ನು ಒತ್ತಾಯಿಸುತ್ತಿದ್ದರೆ, ಇನ್ನೊಂದು ವಲಯ ಸಮಾಲೋಚನೆ ಮತ್ತು ರಾಜಕೀಯ ಸಂವೇದನಾಶೀಲತೆಯನ್ನು ಮುಖ್ಯವೆಂದು ಪರಿಗಣಿಸುತ್ತಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm