ಬ್ರೇಕಿಂಗ್ ನ್ಯೂಸ್
30-04-26 08:16 pm HK News Staffer ಕರ್ನಾಟಕ
ಕಲಬುರಗಿ, ಎಪ್ರಿಲ್ 30: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆಯ ಗೊಂದಲ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ವದಂತಿಗೆ ಹೈಕಮಾಂಡ್ ತೆರೆ ಎಳೆದಂತಾಗಿದೆ.
ಕಲಬುರಗಿಯಲ್ಲಿ ಮಾಧ್ಯಮಕ್ಕೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲಗಳಿರುವುದು ನಿಜ, ಅದು ಶೀಘ್ರವೇ ಬಗೆಹರಿಯಲಿದೆ. ನಾನು ಸಿಎಂ ಆಗಬೇಕೆಂದು ಕೆಲವರು ಹೇಳುತ್ತಾರೆ, ನೀವು ಮಾಧ್ಯಮದವರು ಕೂಡ ಆಗಾಗ ಆ ವಿಷಯ ಬಗ್ಗೆ ಮಾತನಾಡುತ್ತಿರುತ್ತೀರಿ, ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧಾಂತ ಮತ್ತು ದಶಕಗಳ ದುಡಿಮೆ ಮುಖ್ಯ ಎಂದರು.
ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಉದ್ಭವಿಸುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕೆ ಸಮಯ ಹಿಡಿಯುತ್ತದೆ, ಆ ಸಮಯ ಬಂದಾಗ ನೋಡೋಣ ಎಂದರು.
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡಬೇಕೆಂದು ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರು ನಿರ್ಣಯ ತೆಗೆದುಕೊಂಡರೆ ಸಮಯ ಹಿಡಿಯುತ್ತದೆ. ನಾನು ಸಿಎಂ ಆದರೆ ಉತ್ತಮ ಎಂದು ಅವರು ಹೇಳುತ್ತಾರೆ, ನೀವು ಹೇಳುತ್ತೀರಿ, ಮೇಲಿನವರೂ ಹೇಳುತ್ತಾರೆ, ಆದರೆ ನಮ್ಮ ಹಣೆಬರಹ ಅನ್ನುವುದಕ್ಕಿಂತ ಪಕ್ಷದ ಸಿದ್ಧಾಂತ ಪ್ರಕಾರ ನಿರ್ಣಯಗಳನ್ನು ತೆಗೆದುಕೊಳ್ಳುತ್ತಾರೆ, ಅದನ್ನು ಹೆಚ್ಚಾಗಿ ಸೋನಿಯಾ ಗಾಂಧಿಯವರು ನಿರ್ಧರಿಸುತ್ತಾರೆ ಎಂದರು.
ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಉಪ ಚುನಾವಣೆ ಮುಗಿದು ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಲ್ಲಿ ಕಳೆದೊಂದು ವಾರದಿಂದ ಚಟುವಟಿಕೆ ಗರಿಗೆದರಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣದ ಸಚಿವರು, ಶಾಸಕರು ಹೇಳಿಕೆಗಳನ್ನು ನೀಡುತ್ತ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.
ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಮೇ 15ರೊಳಗೆ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಹೈಕಮಾಂಡ್ ಗಿಫ್ಟ್ ನೀಡುತ್ತದೆ ಎಂದು ಆಸೆಪಟ್ಟವರಿಗೆ ತಣ್ಣೀರೆರಚಿದಂತಾಗಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm