ಬ್ರೇಕಿಂಗ್ ನ್ಯೂಸ್
15-05-26 09:56 pm HK News Desk ಕರ್ನಾಟಕ
ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆ ಮಹತ್ವದ ಸಿಹಿಸುದ್ದಿ ನೀಡಿದೆ. ಕರ್ನಾಟಕ ಸರ್ಕಾರವು ಮೇ 11ರಿಂದಲ್ಲೇ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೆ ತಂದಿದ್ದು, ಇದರ ಪರಿಣಾಮವಾಗಿ ಪ್ರೀಮಿಯಂ ಬಿಯರ್ ಹಾಗೂ ವಿದೇಶಿ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ, ಸಾಮಾನ್ಯ ಜನರು ಹೆಚ್ಚಾಗಿ ಬಳಸುವ ಕಡಿಮೆ ದರದ ಮದ್ಯಗಳ ಬೆಲೆ ಏರಿಕೆಯಾಗಿರುವುದು ಗಮನ ಸೆಳೆದಿದೆ.
ಹೊಸ ನೀತಿಯ ಪ್ರಕಾರ, ಶೇ.5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ದರದಲ್ಲಿ ಶೇ.20ರಿಂದ 25ರವರೆಗೆ ಇಳಿಕೆ ಕಂಡುಬಂದಿದೆ. ಕಿಂಗ್ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಮೇಲೆ ಸುಮಾರು 75 ರೂ.ವರೆಗೆ ಕಡಿತವಾಗಿದ್ದರೆ, ಹೈನೆಕೆನ್ ಮೇಲೆ 70 ರೂ., ಯುಬಿ ಎಕ್ಸ್ಪೋರ್ಟ್ ಮೇಲೆ 25 ರೂ. ಹಾಗೂ ಬಡ್ವೈಸರ್ ಪ್ರೀಮಿಯಂ ಮೇಲೆ 20 ರೂ.ವರೆಗೆ ದರ ಇಳಿಕೆಯಾಗಿದೆ.
ಇದರ ಜೊತೆಗೆ ವಿದೇಶಿ ಪ್ರೀಮಿಯಂ ಸ್ಕಾಚ್ ಮತ್ತು ವಿಸ್ಕಿ ಬ್ರಾಂಡ್ಗಳ ಬೆಲೆಯೂ ಇಳಿಕೆಯಾಗಿದೆ. ಬ್ಲ್ಯಾಕ್ ಲೇಬಲ್ ಮತ್ತು ಶಿವಾಸ್ ರೀಗಲ್ 750 ಎಂಎಲ್ ಬಾಟಲಿಯ ಬೆಲೆ 5,190 ರೂ.ಗಳಿಂದ ಸುಮಾರು 4,100 ರೂ.ಗೆ ಇಳಿದಿದ್ದು, ಹೈಎಂಡ್ ಮದ್ಯ ಬಳಕೆದಾರರಿಗೆ ಇದು ದೊಡ್ಡ ಸಮಾಧಾನ ತಂದಿದೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ AiB ನೀತಿ ದೇಶದಲ್ಲೇ ಮೊದಲ ಪ್ರಯೋಗ ಎನ್ನಲಾಗುತ್ತಿದೆ. ಈ ಹಿಂದೆ ಅಸ್ತಿತ್ವದಲ್ಲಿದ್ದ 16 ತೆರಿಗೆ ಸ್ಲ್ಯಾಬ್ಗಳನ್ನು ಇದೀಗ 8ಕ್ಕೆ ಇಳಿಸಲಾಗಿದ್ದು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ಪದ್ಧತಿಯನ್ನು ಅಳವಡಿಸಲಾಗಿದೆ. ಅರವತ್ತು ವರ್ಷಗಳ ಹಳೆಯ ತೆರಿಗೆ ವ್ಯವಸ್ಥೆಗೆ ವಿದಾಯ ಹೇಳಿರುವ ಸರ್ಕಾರ, ಮದ್ಯ ಮಾರುಕಟ್ಟೆಯನ್ನು ಹೊಸ ಮಾದರಿಯಲ್ಲಿ ನಿಯಂತ್ರಿಸಲು ಮುಂದಾಗಿದೆ.
ಆದರೆ, ಕಡಿಮೆ ದರದ ಮದ್ಯಗಳ ಮೇಲೆ ತೆರಿಗೆ ಪ್ರಮಾಣ ಏರಿಕೆಯಾಗಿರುವುದರಿಂದ ಸಾಮಾನ್ಯ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಹೊಸ ನೀತಿ ಶ್ರೀಮಂತ ವರ್ಗದ ಪ್ರೀಮಿಯಂ ಮದ್ಯ ಬಳಕೆದಾರರಿಗೆ ಹೆಚ್ಚು ಲಾಭ ತಂದಿದೆಯೇ ಎಂಬ ಚರ್ಚೆಯೂ ಆರಂಭವಾಗಿದೆ.
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಕ್ಷಣಿಕ ಖುಷಿಗಾಗಿ ಆರೋಗ್ಯ ಮತ್ತು ಕುಟುಂಬದ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಜವಾಬ್ದಾರಿಯುತ ಜೀವನಶೈಲಿಯೇ ಉತ್ತಮ ಬದುಕಿನ ಆಧಾರ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm