ಬ್ರೇಕಿಂಗ್ ನ್ಯೂಸ್
15-05-26 10:30 pm HK News Desk ಕರ್ನಾಟಕ
ವಿಜಯಪುರ, ಮೇ 15: ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿರುವ ನಡುವೆ, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಗ್ರಾಮಸ್ಥರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ಮೃತರನ್ನು ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಬಡಿಗೇರ (28), ಪುತ್ರಿಯರಾದ ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ಗುರುನಾಥ ಬಡಿಗೇರ ತಮ್ಮ ಸ್ವಂತ ಮನೆಯ ದುರಸ್ಥಿ ಕಾರ್ಯ ನಡೆಸುತ್ತಿದ್ದ ಹಿನ್ನೆಲೆ, ತಾತ್ಕಾಲಿಕವಾಗಿ ಹಳೆಯ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಆದರೆ ಗುರುವಾರ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಗೆ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದು, ಕ್ಷಣಾರ್ಧದಲ್ಲೇ ನಾಲ್ವರೂ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಒಂದೇ ಕುಟುಂಬದ ನಾಲ್ವರನ್ನು ಕಳೆದುಕೊಂಡಿರುವ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.
ಇತ್ತೀಚೆಗೆ ರಾಜ್ಯದಲ್ಲಿ ಅಕಾಲಿಕ ಮಳೆ ಮತ್ತು ಬಿರುಗಾಳಿಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳೆಯ ಹಾಗೂ ದುರ್ಬಲ ಮನೆಗಳಲ್ಲಿ ವಾಸಿಸುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಗಳನ್ನು ನಿರ್ಲಕ್ಷ್ಯ ಮಾಡದೆ ಸುರಕ್ಷಿತ ಸ್ಥಳಗಳಿಗೆ ತೆರಳುವುದು ಜೀವ ರಕ್ಷಣೆಗಾಗಿ ಅತ್ಯಂತ ಅಗತ್ಯವಾಗಿದೆ.
ಭಾರೀ ಮಳೆ, ಗಾಳಿ ಅಥವಾ ಗುಡುಗು-ಸಿಡಿಲಿನ ಸಮಯದಲ್ಲಿ ಹಳೆಯ ಅಥವಾ ಹಾನಿಗೊಳಗಾದ ಮನೆಗಳಲ್ಲಿ ವಾಸಿಸುವುದನ್ನು ತಪ್ಪಿಸಿ. ಯಾವುದೇ ಅಪಾಯದ ಸೂಚನೆ ಕಂಡುಬಂದರೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಿ. ಜೀವಕ್ಕಿಂತ ದೊಡ್ಡದು ಯಾವುದೂ ಇಲ್ಲ.

ಸಚಿವರಿಂದ ಸಾಂತ್ವಾನ:
ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪರಿಶೀಲನೆ ನಡೆಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ಈ ದುರ್ಘಟನೆ ನಡೆಯಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಸಾವಿಗೀಡಾದ ನಾಲ್ಕು ಜನರ ಕುಟುಂಬಕ್ಕೆ ತಲಾ ₹ 5 ಲಕ್ಷದಂತೆ ಒಟ್ಟು ₹ 20 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಬದುಕುಳಿದಿರುವ ಬಾಲಕ ವೀರೇಶ ಬಡಿಗೇರ ವಿದ್ಯಾಭ್ಯಾಸಕ್ಕೆ ನೆರವಾಗುವುದಾಗಿ ಹೇಳಿದರು.
ಪರಿಹಾರದ ಹಣವನ್ನು ಬಾಲಕನ ಹೆಸರಿನಲ್ಲಿ ಬ್ಯಾಂಕಿನಲ್ಲಿ ಠೇವಣಿ ಇಡಲಾಗುವುದು ಎಂದರು.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm