ಬ್ರೇಕಿಂಗ್ ನ್ಯೂಸ್
05-01-21 06:18 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಸಿಗುವಂತಾಗಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸಿದೆ ಎಂದರು. ಇದೇ ವೇಳೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಕತ್ತಲ್ಸಾರ್ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತವಾಗಿ ರಾಜ್ಯ ಭಾಷೆ ಸ್ಥಾನ ಸಿಗಬೇಕು ಎಂಬ ಧ್ವನಿಗೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
CM BS Yediyurappa assures on making Tulu as one of the State official Language said Dayananda G Kathalsar, president of Karnataka Tulu Sahitya Academy in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm