ಬ್ರೇಕಿಂಗ್ ನ್ಯೂಸ್
25-05-26 09:38 pm HK News Staffer ಕರ್ನಾಟಕ
ಬೆಂಗಳೂರು, ಮೇ 25: ರಾಜ್ಯ ಬಿಜೆಪಿ ಮುಂದಿನ ಚುನಾವಣೆಗೆ ತಯಾರಿ ನಡೆಸುತ್ತಿದ್ದರೆ, ಇತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಿನ ಬಾರಿಯೂ ಕಾಂಗ್ರೆಸಿನದ್ದೇ ಸರ್ಕಾರ ಎನ್ನುವ ಮೂಲಕ ಪ್ರತಿಪಕ್ಷಗಳಿಗೆ ಸಂದೇಶ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಇಂದೇ ಪೇಪರ್ನಲ್ಲಿ ಬರೆದಿಟ್ಕೊಳಿ ಮುಂದಿನ ಬಾರಿಯೂ ನಮ್ದೇ ಸರ್ಕಾರ. 'ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ' ಇರುತ್ತದೆ ಎಂದು ಖಡಕ್ಕಾಗಿ ಹೇಳಿದ್ದಾರೆ.
''ಪೇಪರ್ನಲ್ಲಿ ಬರೆದಿಟ್ಕೊಳಿ, ಈ ಹಿಂದೆ ನಾನು 136 ಸ್ಥಾನ ಬರುತ್ತದೆ ಅಂತ ಹೇಳಿದ್ದೆ, ಈಗಲೂ ಬರೆದಿಟ್ಕೊಳ್ಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ ಇರುತ್ತದೆ. 2028ರ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರವೇ ಆಧಿಕಾರಕ್ಕೆ ಬರಲಿದೆ'' ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
2023ರಲ್ಲಿ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿಗೆ 122 ಸೀಟು ಬರುತ್ತೆ ಎಂದಿದ್ದರು. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು, ಬರೆದಿಟ್ಟುಕೊಳ್ಳಿ 136 ಸೀಟುಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದಿದ್ದರು. ಈ ಭವಿಷ್ಯ ನಿಜವಾಗಿತ್ತು. ಇದೀಗ ಮತ್ತೊಂದು ಭವಿಷ್ಯ ನುಡಿದಿರುವ ಡಿಕೆಶಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.
ಆದಾಗ್ಯೂ, ಸಿಎಂ ಆಗುವ ಕುರಿತ ಪ್ರಶ್ನೆಗೆ ಉತ್ತರಿಸದೆ ಮೌನವಾದ ಡಿಸಿಎಂ, ದೇಶದಲ್ಲಿನ ದರ ಏರಿಕೆ ಕುರಿತು ಉಲ್ಲೇಖಿಸಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು. ಇದರ ಬಗ್ಗೆ ಮೇ 30ಕ್ಕೆ ಪ್ರತಿಭಟನೆ ನಡೆಸ್ತೀವಿ ಎಂದರು. ಇದೇ ಸಂದರ್ಭದಲ್ಲಿ ದೆಹಲಿಗೆ ಹೋಗುತ್ತಿದ್ದೀರಾ? ಎಂಬ ಪ್ರಶ್ನೆಗೆ, ಹೈಕಮಾಂಡ್ ನಾಯಕರು ಕರೆದರೆ ಮಾತ್ರ ಹೋಗುತ್ತೇನೆ ಎಂದು ಡಿಸಿಎಂ ಉತ್ತರಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm