ಬ್ರೇಕಿಂಗ್ ನ್ಯೂಸ್
27-05-26 04:58 pm HK News Staffer ಕರ್ನಾಟಕ
ಉಡುಪಿ, ಮೇ 27: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕುರಿತಾಗಿ ಹೊಸ ವಿವಾದವೊಂದು ಉದ್ಭವಿಸಿದೆ. ಮಾಜಿ ರೌಡಿ-ಶೀಟರ್ ಸೋನು ಸುಧೀರ್ಗೆ ಆಶೀರ್ವಾದ ನೀಡುತ್ತಿರುವಂತೆ ಕಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ
.
ವೈರಲ್ ಆಗಿರುವ ವಿಡಿಯೋದಲ್ಲಿ, ಕಾರಿನೊಳಗೆ ಕುಳಿತಿರುವ ಸಂದರ್ಭದಲ್ಲಿ ನಾಗಲಕ್ಷ್ಮಿ ಚೌಧರಿ ಮಾಜಿ ರೌಡಿ ಸುಧೀರ್ ಗೆ ತಲೆಗೆ ಕೈ ಇಟ್ಟು ಆಶೀರ್ವಾದ ನೀಡುತ್ತಿರುವ ದೃಶ್ಯ ಕಾಣಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಹಾಗೂ ಟೀಕೆಗೆ ಕಾರಣವಾಗಿದೆ.
ಈ ಘಟನೆ ಉಡುಪಿ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಾರ್ವಜನಿಕ ಹುದ್ದೆಯಲ್ಲಿರುವವರು ಅಪರಾಧ ಹಿನ್ನೆಲೆಯಿರುವ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವ ಕುರಿತು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ.
ಸೋನು ಸುಧೀರ್ 2021 ರಿಂದ 2023ರ ಅವಧಿಯಲ್ಲಿ ಕಾಪು ಪೊಲೀಸ್ ಠಾಣೆಯ ರೌಡಿ-ಶೀಟರ್ ಪಟ್ಟಿಯಲ್ಲಿ ಇದ್ದು ಆತನ ವಿರುದ್ದ ಹಲವು ಅಪರಾಧ ಪ್ರಕರಣಗಳು ದಾಖಲಾಗಿದೆ.
.
ನಾಗಲಕ್ಷ್ಮೀ ಚೌಧರಿ ಅವರು ಇಂತಹ ವಿವಾದಾತ್ಮಕ ವ್ಯಕ್ತಿಗಳೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ವಿವಾದಿತ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಮಹಿಳಾ ಆಯೋಗದ ಅಧ್ಯಕ್ಷರು ಶುಭ ಹಾರೈಸಿದ್ದ ವಿಡಿಯೋ ಕೂಡ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಇದೀಗ ಅದರ ಬೆನ್ನಲ್ಲೇ ರೌಡಿಶೀಟರ್ ಹಿನ್ನೆಲೆಯುಳ್ಳ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm