ಬ್ರೇಕಿಂಗ್ ನ್ಯೂಸ್
28-05-26 10:56 am HK News Staffer ಕರ್ನಾಟಕ
ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಬದುಕಿನ ಮಹತ್ವದ ಅಧ್ಯಾಯ ಇಂದು ಅಂತ್ಯಗೊಳ್ಳುವ ಹಂತಕ್ಕೆ ತಲುಪಿದೆ. ಕಾಂಗ್ರೆಸ್‌ನಲ್ಲಿ ಎರಡನೇ ಅವಧಿಯ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಕಳೆದ ಎರಡು ದಿನಗಳಿಂದ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವೇಗದ ರಾಜಕೀಯ ಬೆಳವಣಿಗೆಗಳು ನಿರ್ಣಾಯಕ ಘಟ್ಟ ತಲುಪಿದ್ದು, ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ್ದಾರೆ ಎನ್ನಲಾಗಿದೆ. ಇದರ ನಡುವೆ ಮುಖ್ಯಮಂತ್ರಿ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಮಹತ್ವದ ಬ್ರೇಕ್‌ಫಾಸ್ಟ್ ಸಭೆ ಕರೆದಿದ್ದು, ಎಲ್ಲಾ ಸಚಿವರು ಭಾಗಿಯಾಗಿದ್ದಾರೆ.
ಇದೇ ವೇಳೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಹಿಂದುಳಿದ ವರ್ಗ ಕುರುಬ ಜನಾಂಗದ ಸಿದ್ದರಾಮಯ್ಯ ಅವರನ್ನು ಪದಚ್ಯುತಿಗೊಳಿಸಿ ಡಿಕೆಶಿ ಸಿಎಂ ಆಗುತ್ತಿದ್ದಾರೆಂಬ ಸಂದೇಶ ಹೋಗುವುದನ್ನು ತಪ್ಪಿಸಲು ಒಕ್ಕಲಿಗ ಸಮುದಾಯದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಸಹಕಾರ ನೀಡುವಂತೆ ಕೋರಿದ್ದಾರೆ. ಡಿಕೆ ಸಿಎಂ ಆದರೂ ಸಿದ್ದರಾಮಯ್ಯ ಅವರ ಸಹಕಾರ ಇಲ್ಲದೆ ಆಡಳಿತ ನಡೆಸಲು ಸಾಧ್ಯವಿಲ್ಲ ಎನ್ನುವುದನ್ನು ತಿಳಿದಿರುವ ಡಿಕೆ, ಚಾಣಾಕ್ಷ ನಡೆ ಇಟ್ಟಿದ್ದಾರೆ.


ಸಭೆಯಲ್ಲಿ ಸಿದ್ದರಾಮಯ್ಯ ಅವರು ಸಚಿವರ ಮುಂದೆ ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆಯಿದೆ. ಬ್ರೇಕ್‌ಫಾಸ್ಟ್ ಸಭೆಯ ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಾರೆಂದು ಹೇಳಲಾಗಿತ್ತು. ಇದರ ಬಗ್ಗೆ ರಾಜಭವನಕ್ಕೆ ಸಿಎಂ ಕಚೇರಿಯಿಂದ ಮಾಹಿತಿ ನೀಡಿದ್ದರೂ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನಿನ್ನೆ ರಾತ್ರಿ ತನ್ನ ಸಂಬಂಧಿಕರ ಅನಾರೋಗ್ಯ ನೆಪದಲ್ಲಿ ಮುಂಬೈ ತೆರಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಇಂದೇ ರಾಜಿನಾಮೆ ನೀಡುತ್ತಾರೆಯೇ ಎನ್ನುವ ಕುತೂಹಲ ಇದೆ.
ಇನ್ನೊಂದೆಡೆ, ಸಿದ್ದರಾಮಯ್ಯ ಅವರ ಆಪ್ತ ಹಿರಿಯ ಸಚಿವರು ಹಾಗೂ ಬೆಂಬಲಿಗರು ರಾಜಿನಾಮೆ ನಿರ್ಧಾರ ಬದಲಿಸುವಂತೆ ನಿರಂತರ ಮನವಿ ಮಾಡುತ್ತಿದ್ದರೂ, ಸಿಎಂ ತಮ್ಮ ನಿಲುವಿನಲ್ಲಿ ಅಚಲರಾಗಿದ್ದಾರೆ ಎನ್ನಲಾಗಿದೆ. “ಹೈಕಮಾಂಡ್‌ಗೆ ಕೊಟ್ಟ ಮಾತಿಗೆ ಬದ್ಧನಾಗಿರುತ್ತೇನೆ. ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತೇನೆ” ಎಂದು ಅವರು ಆಪ್ತರಿಗೆ ಖಡಕ್ ಸಂದೇಶ ನೀಡಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ಲಭ್ಯವಾಗಿದೆ.
ಸಿದ್ದರಾಮಯ್ಯ ರಾಜೀನಾಮೆ ಬಳಿಕ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಸಭೆಯಲ್ಲಿ ಅಧಿಕೃತವಾಗಿ ಸಿದ್ದರಾಮಯ್ಯ ಅವರ ರಾಜೀನಾಮೆ ಘೋಷಣೆಯಾಗಲಿದ್ದು, ಹೈಕಮಾಂಡ್ ಮುಂದಿನ ಶಾಸಕಾಂಗ ನಾಯಕನಾಗಿ ಡಿ.ಕೆ. ಶಿವಕುಮಾರ್ ಹೆಸರನ್ನು ಸೂಚಿಸುವ ಸಾಧ್ಯತೆಗಳು ದಟ್ಟವಾಗಿವೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm