ಬ್ರೇಕಿಂಗ್ ನ್ಯೂಸ್
28-05-26 03:24 pm HK News Staffer ಕರ್ನಾಟಕ
ಬೆಂಗಳೂರು, ಮೇ 28 : ರಾಜ್ಯ ರಾಜಕಾರಣದಲ್ಲಿ ಹಲವು ದಿನಗಳಿಂದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಅಧಿಕೃತ ತೆರೆಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗಿಳಿದಿದ್ದಾರೆ.
ರಾಜೀನಾಮೆಗೂ ಮುನ್ನ ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಜೊತೆಗೆ ಕೊನೆಯ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಯಿತು. ಸದಾ ರಾಜಕೀಯ ಚಟುವಟಿಕೆ, ಜನಸಾಗರ ಮತ್ತು ಅಧಿಕಾರದ ಗಿಜಿಗುಡುವಿಕೆಯಿಂದ ಕಂಗೊಳಿಸುತ್ತಿದ್ದ ಕಾವೇರಿ ನಿವಾಸದಲ್ಲಿ ಇಂದು ಭಾವುಕ ಮೌನ ಆವರಿಸಿತ್ತು.
ಸಭೆಯಲ್ಲಿ ಭಾಗಿಯಾಗಿದ್ದ ಸಚಿವರು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ದೀರ್ಘ ರಾಜಕೀಯ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣಾಲಿಗಳು ತೇವಗೊಂಡಿದ್ದವು. ಈ ವೇಳೆ ಸಹೋದ್ಯೋಗಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, ಮಧ್ಯಾಹ್ನ ಭೋಜನದ ಬಳಿಕ ರಾಜೀನಾಮೆ ಪತ್ರದೊಂದಿಗೆ ಲೋಕಭವನದತ್ತ ಹೆಜ್ಜೆ ಹಾಕಿದರು.

ರಾಜ್ಯಪಾಲರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ಸಂವಿಧಾನಾತ್ಮಕ ಪ್ರಕ್ರಿಯೆ ಪ್ರಕಾರ ರಾಜ್ಯಪಾಲರು ಅಧಿಕೃತವಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಂಗೀಕಾರವಾಗಲಿದೆ. ಮೂಲಗಳ ಪ್ರಕಾರ ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದ್ದು, ಬಳಿಕ ರಾಜೀನಾಮೆ ಅಂಗೀಕಾರದ ಅಂತಿಮ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.
ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಪಯಣದಲ್ಲಿ ದಣಿವರಿಯದ ಹೋರಾಟಗಾರನಾಗಿ ಹೊರಹೊಮ್ಮಿದ್ದ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ ಅವರು ರಾಜೀನಾಮೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯಕ್ಕೆ ದಾರಿ ಮಾಡಿಕೊಟ್ಟಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm