ಬ್ರೇಕಿಂಗ್ ನ್ಯೂಸ್
28-05-26 06:18 pm HK News Staffer ಕರ್ನಾಟಕ
ಕಲಬುರಗಿ, ಮೇ 28: ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡಲು ಒತ್ತಡ ಹಾಕಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸುಡುವ ಬಿಸಿಲಿನಲ್ಲಿ ಜಮಾಯಿಸಿದ್ದ ಸಮುದಾಯದ ಜನರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಮೊಳಗಿಸಿದರು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಕೆಲಹೊತ್ತು ವಾಗ್ವಾದ ಜರುಗಿತು. ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರಗಳನ್ನು ಸುಟ್ಟು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಹಾಗೂ ಅವರ ಅಹಿಂದ ಬೆಂಬಲವೇ ಕಾರಣ. ಸಿದ್ದರಾಮಯ್ಯ ರಾಜೀನಾಮೆ ನೀಡಿದರೇ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಹಿನ್ನಡೆ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಗುರುನಾಥ್ ಎಸ್ ಪೂಜಾರಿ ಮಾತನಾಡಿ, ‘ರಾಜ್ಯಕ್ಕೆ ಗ್ಯಾರಂಟಿ ನೀಡಿ, ಅದನ್ನು ವ್ಯವಸ್ಥಿತವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಉದ್ದೇಶ ಏನು?. 2028ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಲಿದ್ದಾರೆ ಎನ್ನುವ ಕಾರಣಕ್ಕೆ ಅಹಿಂದ ಸಮಾಜ ಶೇ 90ರಷ್ಟು ಮತ ಹಾಕಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದೆ’ ಎಂದರು.
ಸಿದ್ದರಾಮಯ್ಯ 2004ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದಾಗ 58 ಶಾಸಕರು ಆಯ್ಕೆಯಾಗಿದ್ದರು. ಅದೇ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಹೊರ ಬಂದ ನಂತರ, ಈಗ ಕೇವಲ 18 ಶಾಸಕರಿಗೆ ಇಳಿದಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೇ 136 ಶಾಸಕರಿರುವ ಕಾಂಗ್ರೆಸ್ 2028ರಲ್ಲಿ ಕೇವಲ 36ಕ್ಕೆ ಇಳಿಯಲಿದೆ’ ಎಂದು ಆಕ್ರೋಶ ಹೊರಹಾಕಿದರು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm