ಬ್ರೇಕಿಂಗ್ ನ್ಯೂಸ್
29-05-26 10:29 am HK News Staffer ಕರ್ನಾಟಕ
ಬೆಂಗಳೂರು, ಮೇ 29: ಕರ್ನಾಟಕ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಸಂವಿಧಾನಬದ್ಧ ಚಾಲನೆ ದೊರೆತಿದ್ದು, ಹೊಸ ಸರ್ಕಾರ ರಚನೆಗೆ ವೇಗ ಸಿಕ್ಕಿದೆ.
ಲೋಕಭವನದಿಂದ ರಾಜೀನಾಮೆ ಅಂಗೀಕಾರಕ್ಕೆ ಸಂಬಂಧಿಸಿದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ಸಿದ್ದರಾಮಯ್ಯ ಅವರು ಇನ್ನೂ ಎರಡು-ಮೂರು ದಿನಗಳ ಕಾಲ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ಗುರುವಾರ ಸಿದ್ದರಾಮಯ್ಯ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದ್ದರು. ಕಾರ್ಯದರ್ಶಿಗಳು ಪತ್ರವನ್ನು ಸ್ವೀಕರಿಸಿದ್ದರೂ, ಸಂವಿಧಾನದ ಪ್ರಕಾರ ರಾಜ್ಯಪಾಲರ ಸಹಿ ಅಗತ್ಯವಾಗಿತ್ತು. ಇಂದೋರ್‌ನಿಂದ ಬೆಂಗಳೂರಿಗೆ ಮರಳಿದ ರಾಜ್ಯಪಾಲರು ಶುಕ್ರವಾರ ಬೆಳಗ್ಗೆ ರಾಜೀನಾಮೆ ಪತ್ರಕ್ಕೆ ಅಧಿಕೃತ ಅಂಗೀಕಾರ ನೀಡಿರುವುದಾಗಿ ತಿಳಿದುಬಂದಿದೆ.
ಇದೀಗ ಕಾಂಗ್ರೆಸ್‌ನಲ್ಲಿ ನಾಯಕತ್ವ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ಪಕ್ಷದ ಮೂಲಗಳ ಪ್ರಕಾರ, ಎಲ್ಲವೂ ಯೋಜನೆಯಂತೆ ನಡೆದರೆ ಸೋಮವಾರ ಸಂಜೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಭರದ ಸಿದ್ಧತೆಗಳು ಆರಂಭಗೊಂಡಿವೆ.
ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರದೊಂದಿಗೆ ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಕಾಂಗ್ರೆಸ್‌ನ ಮುಂದಿನ ನಾಯಕತ್ವದತ್ತ ಎಲ್ಲರ ಚಿತ್ತ ನೆಟ್ಟಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಸಾಧ್ಯತೆ ಬಹುತೇಕ ಖಚಿತವಾಗಿರುವ ಹಿನ್ನೆಲೆ, ರಾಜ್ಯದ ರಾಜಕೀಯ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡಿವೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm