ಬ್ರೇಕಿಂಗ್ ನ್ಯೂಸ್
29-05-26 10:41 pm HK News Staffer ಕರ್ನಾಟಕ
ಬೆಂಗಳೂರು, ಮೇ 29: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ರಾಜಕೀಯದ ಗಮನ ಈಗ ನೂತನ ಮುಖ್ಯಮಂತ್ರಿ ಆಯ್ಕೆಯತ್ತ ಕೇಂದ್ರೀಕೃತವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾಗಲಿರುವ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ.
ಮೂಲಗಳ ಪ್ರಕಾರ, ಸೋಮವಾರ ಗೋಧೂಳಿ ಮುಹೂರ್ತದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಸಮಾರಂಭಕ್ಕೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳು ವೇಗ ಪಡೆದುಕೊಂಡಿವೆ.
ಪ್ರಮಾಣವಚನ ಸಮಾರಂಭದ ಕುರಿತು ಕಾಂಗ್ರೆಸ್ ಒಳವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಡಿಕೆಶಿ ಆರಂಭಿಕ ಹಂತದಲ್ಲಿ ಏಕಾಂಗಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಆದರೆ ಉಪ ಮುಖ್ಯಮಂತ್ರಿ ಸೇರಿದಂತೆ ಕನಿಷ್ಠ 8 ಮಂದಿ ಸಚಿವರು ಕೂಡ ಮೊದಲ ಹಂತದಲ್ಲೇ ಪ್ರಮಾಣವಚನ ಸ್ವೀಕರಿಸಬೇಕು ಎಂಬ ಒತ್ತಡವನ್ನು ಪಕ್ಷದ ಹಿರಿಯ ನಾಯಕರು ಹೇರಿದ್ದಾರೆ. ಈ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್, ವಿಶೇಷವಾಗಿ ರಾಹುಲ್ ಗಾಂಧಿ ಕೈಗೊಳ್ಳಲಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಸಭೆಯಲ್ಲಿ ಸಿದ್ದರಾಮಯ್ಯ ಅವರು ಡಿಕೆಶಿ ಹೆಸರನ್ನು ಪ್ರಸ್ತಾಪಿಸಲಿದ್ದು, ಕೇಂದ್ರ ನಾಯಕರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅನುಮೋದನೆ ನೀಡಲಿದ್ದಾರೆ ಎನ್ನಲಾಗಿದೆ.
ಅದಾದ ಬಳಿಕ ಡಿಕೆಶಿ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೂರು ದಿನಗಳಿಂದ ರಾಜಕೀಯ ಬೆಳವಣಿಗೆಗಳ ಕುರಿತು ಮೌನ ವಹಿಸಿದ್ದ ಡಿ.ಕೆ. ಶಿವಕುಮಾರ್, ಇದೀಗ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಸಿಎಲ್‌ಪಿ ಸಭೆಯ ಬಗ್ಗೆ ಮಾಹಿತಿ ನೀಡಿರುವುದು ರಾಜಕೀಯ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm