ಬ್ರೇಕಿಂಗ್ ನ್ಯೂಸ್
03-06-26 12:44 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 3: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲಿ ಡೆಪ್ಯುಟಿ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಖಾದರ್, ನೂತನ ಸಚಿವ ಸಂಪುಟ ಸೇರ್ಪಡೆಗೆ ಅಧಿಕೃತ ಸಿದ್ಧತೆ ಆರಂಭಿಸಿದ್ದಾರೆ.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬಂದ ಬೆನ್ನಲ್ಲೇ ಖಾದರ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರಿಗೆ ಕೃತಜ್ಞತೆ ;
ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಯು.ಟಿ. ಖಾದರ್ ಕೃತಜ್ಞತೆ ಸಲ್ಲಿಸಿದರು. ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ತಮ್ಮ ರಾಜೀನಾಮೆ ಕುರಿತು ಮಾಹಿತಿ ನೀಡಿದ್ದು, ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ
ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿದ ಯು.ಟಿ. ಖಾದರ್, ಯಾವುದೇ ನಿರ್ದಿಷ್ಟ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದು, “ನಾನು ಯಾವುದೇ ಖಾತೆಗಾಗಿ ಒತ್ತಡ ಹಾಕಿಲ್ಲ. ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಸಂತೋಷ. ಆದರೆ ಪಕ್ಷದ ನಾಯಕರು ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿರ್ವಹಿಸಲು ಸಿದ್ಧನಿದ್ದೇನೆ. ಕ್ರಿಕೆಟ್‌ನಲ್ಲಿ ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುವಂತೆ, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆ” ಎಂದು ಹೇಳಿದರು.



ಆರೋಗ್ಯ ಖಾತೆ ಸಿಗುವ ಸಾಧ್ಯತೆ ?
ಈ ಹಿಂದೆ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿರುವ ಯು.ಟಿ. ಖಾದರ್ ಅವರಿಗೆ ಡಿಕೆ ಶಿವಕುಮಾರ್ ಸರ್ಕಾರದಲ್ಲೂ ಆರೋಗ್ಯ ಖಾತೆಯೇ ಸಿಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಅಂತಿಮ ನಿರ್ಧಾರ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಕೈಯಲ್ಲಿದ್ದು, ಅಧಿಕೃತ ಘೋಷಣೆಗಾಗಿ ಕಾದು ನೋಡಬೇಕಿದೆ.
ಬೆಂಬಲಿಗರ ಸಂಭ್ರಮಾಚರಣೆ ;
ಖಾದರ್ ಸಚಿವರಾಗುವುದು ಖಚಿತ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಅವರ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದರು. ಬೆಂಗಳೂರಿನ ಗಾಲ್ಫ್ ಗ್ರೌಂಡ್ ಸಮೀಪದ ಖಾದರ್ ನಿವಾಸಕ್ಕೆ ಆಗಮಿಸಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೂಗುಚ್ಛ ನೀಡಿ ಶುಭಾಶಯ ಕೋರಿದರು. ಹಲವೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm