ಬ್ರೇಕಿಂಗ್ ನ್ಯೂಸ್
03-06-26 05:41 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ದೊಡ್ಡಾಲಹಳ್ಳಿಯ ಕೆಂಪೇಗೌಡ ಶಿವಕುಮಾರ್ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಮಾಣವಚನ ಸ್ವೀಕರಿಸಿದ್ದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿದ್ದಾರೆ.
ಸಂವಿಧಾನ ಮತ್ತು ಗೌಪ್ಯತೆ ಕಾಯ್ದುಕೊಳ್ಳುವ ವಿಚಾರದಲ್ಲಿ ಪ್ರಮಾಣ ಸ್ವೀಕರಿಸಿದ ಶಿವಕುಮಾರ್, ತನ್ನ ದೇವರೆಂದು ಹೇಳಿಕೊಳ್ಳುವ ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ್ದಾರೆ. ಎರಡನೇಯವರಾಗಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್ ಅವರು ಡಾ.ಬಿ.ಆರ್ ಅಂಬೇಡ್ಕರ್ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರು.
ಆಬಳಿಕ ಸಂಪುಟ ದರ್ಜೆ ಸಚಿವರಾಗಿ ಕೆ.ಎಚ್ ಮುನಿಯಪ್ಪ ಮತ್ತು ಕೆಜೆ ಜಾರ್ಜ್ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರೆ, ಎಂಬಿ ಪಾಟೀಲ್ ಬಸವಣ್ಣ ಮತ್ತು ಲಿಂಗೈಕ್ಯ ಬಸವಾದಿ ಶರಣರು ಹಾಗೂ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುವುದಾಗಿ ಹೇಳಿದರು. ಈ ವೇಳೆ, ರಾಜ್ಯಪಾಲರು ಪ್ರಮಾಣವಚನ ಪತ್ರದಲ್ಲಿ ಇಲ್ಲದೇ ಇರುವುದನ್ನು ಹೇಳಬಾರದು ಎಂದು ಎಂಬಿ ಪಾಟೀಲರಿಗೆ ಸೂಚಿಸಿದರು.
ಆನಂತರ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಶ್ರದ್ಧಾಪೂರ್ವಕವಾಗಿ ರಾಗದ್ವೇಷಗಳಿಲ್ಲದೆ ಕಾರ್ಯ ನಿರ್ವಹಿಸುತ್ತೇನೆಂದು ಪ್ರಮಾಣ ಸ್ವೀಕರಿಸಿದರು. ಆನಂತರ, ಯುಟಿ ಖಾದರ್ ದೇವರ ಹೆಸರಿನಲ್ಲಿ, ಈಶ್ವರ ಖಂಡ್ರೆಯವರು ದೇವರು ಹಾಗು ಚನ್ನಬಸಪ್ಪ ಪಟ್ಟದೇವರ ಹೆಸರಲ್ಲಿ ಪ್ರಮಾಣ ಮಾಡುವುದಾಗಿ ಹೇಳಿದರು. ಯತೀಂದ್ರ ಸಿದ್ದರಾಮಯ್ಯ ಪ್ರಮಾಣ ಸ್ವೀಕರಿಸಿ ಯಾವುದೇ ದೇವರ ಹೆಸರನ್ನು ಉಲ್ಲೇಖಿಸದೆ ಶ್ರದ್ಧಾಪೂರ್ವಕವಾಗಿ ಕೆಲಸ ಮಾಡುತ್ತೇನೆಂದು ಹೇಳಿದರು. ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಡಿಸಿಎಂ ಸೇರಿ 11 ಮಂದಿ ಹಿಂದಿನ ಸರ್ಕಾರದಲ್ಲಿ ಸಚಿವರಾದವರೇ ಆಗಿದ್ದು ಹೊಸದಾಗಿ ಯುಟಿ ಖಾದರ್ ಮತ್ತು ಯತೀಂದ್ರ ಸಿದ್ದರಾಮಯ್ಯ ಸಚಿಚರಾಗಿ ಸೇರ್ಪಡೆಯಾಗಿದ್ದಾರೆ.



ಪ್ರಮಾಣವಚನ ಸಮಾರಂಭಕ್ಕೆ 1350 ಜನರಿಗೆ ಸೀಮಿತವಾಗಿ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಆದರೆ, ಸಾವಿರಾರು ಜನರು ಆಗಮಿಸಿದ್ದು ರಾಜಭವನ ಮತ್ತು ವಿಧಾನಸೌಧ ಬಳಿ ಸೇರಿದ್ದರು. ಸಮಾರಂಭದಲ್ಲಿ ಪಾಲ್ಗೊಳ್ಳಲು ಪಾಸ್ ಗಳನ್ನು ನೀಡಲಾಗಿತ್ತು. ಆದರೆ 3.30ರ ನಂತರ ಪಾಸ್ ಹಿಡಿದು ಬಂದವರಿಗೂ ಅವಕಾಶ ನೀಡಲಿಲ್ಲ. ಒಳಭಾಗದಲ್ಲಿ ಜನರು ತುಂಬಿ ಹೋಗಿದ್ದರು. ವಿವಿಧ ಮಠಗಳ ಸ್ವಾಮೀಜಿಗಳು, ಗಣ್ಯರಿಗೆ ಅವಕಾಶ ನೀಡಲಾಗಿತ್ತು.
ಸಮಾರಂಭದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ತೆಲಂಗಾಣ ಸಿಎಂ ರೇವಂತ ರೆಡ್ಡಿ, ಕೇರಳ ಸಿಎಂ ವಿಡಿ ಸತೀಶನ್, ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಉಪಸ್ಥಿತರಿದ್ದರು. ಡಿಕೆಶಿ ಆಪ್ತರು, ಉದ್ಯಮಿಗಳು, ಚಿತ್ರರಂಗದ ಗಣ್ಯರು, ಹಲವಾರು ಕ್ಷೇತ್ರದ ಪ್ರಮುಖರು ಸಭಾಂಗಣದಲ್ಲಿ ಸೇರಿದ್ದರು. ಪ್ರಮಾಣವಚನ ಬಳಿಕ ರಾಜಭವನದಿಂದ ವಿಧಾನಸೌಧಕ್ಕೆ ತೆರೆದ ವಾಹನದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆರವಣಿಗೆ ಇದೆಯೆಂದು ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಅಲ್ಲಲ್ಲಿ ನೇರ ವೀಕ್ಷಣೆಗೆ ಸ್ಕ್ರೀನ್ ಹಾಕಲಾಗಿತ್ತು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm