ಬ್ರೇಕಿಂಗ್ ನ್ಯೂಸ್
04-06-26 07:35 pm HK News Staffer ಕರ್ನಾಟಕ
ಬೆಂಗಳೂರು, ಜೂ.4: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡವೆಂದು ಹಿರಿಯ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮಧ್ಯಾಹ್ನ ಸಿಎಂ ಡಿಕೆಶಿ ಜೊತೆಗೆ ಮೀಟಿಂಗ್ ಹಾಲ್ ನಲ್ಲಿ ಕೆಲವು ಸಚಿವರು ಮಾತುಕತೆ ಮಾಡಿದ್ದು ಅದರಲ್ಲಿ ರಾಮಲಿಂಗಾರೆಡ್ಡಿ ಅವರೂ ಪಾಲ್ಗೊಂಡಿದ್ದರು. ಸಭೆಯಲ್ಲಿ ಬಿಸಿ ಬಿಸಿ ಮಾತುಕತೆ ಆಗಿದ್ದು ರೆಡ್ಡಿ ಅರ್ಧಕ್ಕೆ ಎದ್ದು ಬಂದಿದ್ದಾರೆ.
ರಾಮಲಿಂಗಾರೆಡ್ಡಿ ಅವರು ಈ ಬಾರಿ ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದರು. ಆದರೆ, ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಇದರಿಂದ ಸಿಟ್ಟಾದ ರಾಮಲಿಂಗಾರೆಡ್ಡಿ ಸಭೆಯಿಂದ ಹೊರಬಂದು ಸಿಟ್ಟು ತೋರಿಸಿಕೊಳ್ಳದಿದ್ದರೂ ನೇರವಾಗಿ ಸಿಎಂ ಕಚೇರಿಯತ್ತ ತೆರಳಿದ್ದಾರೆ. ಇದರಿಂದ ಮಾಧ್ಯಮದವರಿಗೂ ಏನೋ ಎಡವಟ್ಟು ಆದ ಮಾಹಿತಿ ಸೋರಿಕೆಯಾಗಿತ್ತು. ಆನಂತರ, ಕಚೇರಿಗೆ ಬಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಈ ವೇಳೆ, ತನಗೆ ಸಚಿವ ಸ್ಥಾನವೇ ಬೇಡವೆಂದು ಹೇಳಿ ರಾಜೀನಾಮೆ ನೀಡಿದ್ದಾರೆಂಬ ವದಂತಿ ಹರಡಿದೆ.
2023ರಲ್ಲಿ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲು ನಿರ್ಧರಿಸಲಾಗಿತ್ತು. ಆದರೆ ಆಗಿನ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಪಡೆದಿದ್ದರು. ಬಳಿಕ ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೆ ಕೊಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರಿಗೆ ಮಾತು ಕೊಟ್ಟಿದ್ದರು ಎನ್ನಲಾಗಿದೆ.
ಆದರೆ ಈಗ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ನೀಡಿರುವುದು ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ಅವರಲ್ಲಿ ಬೇಸರ ಮೂಡಿಸಿದೆ. ನನಗೆ ಸಚಿವ ಸ್ಥಾನವೇ ಬೇಡ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ ಎನ್ನಲಾಗಿದೆ. ಅವರನ್ನು ಸಮಾಧಾನಿಸಿ ಮನವೊಲಿಸಲು ಡಿ.ಕೆ. ಶಿವಕುಮಾರ್ ಪಯತ್ನ ನಡೆಸಿದ್ದಾರೆ. ಆದರೆ ಅದಕ್ಕೆ ಒಪ್ಪದ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನದಲ್ಲಿ ಹೊರ ನಡೆದಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm