ಬ್ರೇಕಿಂಗ್ ನ್ಯೂಸ್
11-06-26 08:31 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 11: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪದತ್ಯಾಗಕ್ಕೆ ಮುನ್ನವೇ ಕುರುಬ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾಯಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುವ ವಿಚಾರ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ನೂತನ ಸಿಎಂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ. ಸಮುದಾಯ ಭವನ ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್‌ನ ಶೇ. 52 ರಷ್ಟು ಅನುದಾನ ಕೆಲವೇ ಸಮುದಾಯದ ಸಂಸ್ಥೆಗಳಿಗೆ ಮಂಜೂರಾಗಿದೆ.
2026-27 ಸಾಲಿನ ಬಜೆಟ್‌ನಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 136 ಕೋಟಿ ಮೀಸಲಿಟ್ಟಿದ್ದ ಸರ್ಕಾರ ಈ ಪೈಕಿ ಶೇ 52 ರಷ್ಟು ಅನುದಾನವನ್ನು ಕೇವಲ ಮೂರ್ನಾಲ್ಕು ಸಮುದಾಯಗಳಿಗೆ ಮಾತ್ರ ಮಂಜೂರು ಮಾಡಿದೆ. 8 ಮಡಿವಾಳ ಸಮುದಾಯ ಸಂಘಗಳು, 2 ಯಾದವ ಸಮುದಾಯ ಸಂಘಗಳು, 1 ಹೆಳವ ಸಮುದಾಯ ಸಂಘ, 1 ಸವಿತಾ ಸಮಾಜದ ಸಂಘ ಮತ್ತು ಟೀ ನರಸೀಪುರ ತಾಲೂಕಿಗೆ 13 ಸಮುದಾಯ ಭವನಗಳನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಕುರುಬ ಸಮುದಾಯದ 89 ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ, ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್‌ಗೂ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಸಮುದಾಯದ ಅಡಿಯಲ್ಲಿ ಸಾವಿರಕ್ಕೂ ಹೆಚ್ಚು ಜಾತಿಗಳು ಬರುತ್ತವೆ. ಪ್ರವರ್ಗ 1ರಲ್ಲಿಯೇ 147 ಜಾತಿಗಳಿದ್ದು, ಇವೆಲ್ಲವನ್ನೂ ಕಡೆಗಣಿಸಿ ಕೇವಲ ಮೂರ್ನಾಲ್ಕು ಸಮುದಾಯಕ್ಕೆ ತರಾತುರಿಯಲ್ಲಿ ಅನುದಾನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಸ್ವಜನರಿಗೆ ಆದ್ಯತೆ ನೀಡಿದರೇ ಎನ್ನುವ ಅನುಮಾನ ಮೂಡಿಸಿದೆ. ಹಿಂದುಳಿದ ವರ್ಗಗಳ ಪೈಕಿ ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು, ಅಧಿಕಾರದಿಂದ ಇಳಿಯುವ ವೇಳೆ ತರಾತುರಿಯಲ್ಲಿ ಸಿದ್ದರಾಮಯ್ಯ ಈ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm