ಬ್ರೇಕಿಂಗ್ ನ್ಯೂಸ್
19-06-26 04:18 pm HK News Staffer ಕರ್ನಾಟಕ
ಮೈಸೂರು, ಜೂನ್ 19: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ನಾಲ್ವರು ಶಾಸಕರು ಅಡ್ಡ ಮತದಾನ ಮಾಡಿದ್ದು ಅವರ ಯಾರೆಂದು ಗೊತ್ತಿದೆ. ಈಗಾಗಲೇ ಅವರು ಪಕ್ಷ ಬಿಡುವ ಚರ್ಚೆಯನ್ನೂ ಮಾಡಿದ್ದಾರೆ. ಇದನ್ನು ಪರೀಕ್ಷೆ ಮಾಡಲೆಂದೇ ಅಭ್ಯರ್ಥಿ ಹಾಕಿದ್ದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪರಿಷತ್ ಚುನಾವಣೆ ವಿಚಾರದಲ್ಲಿ ಹಲವು ವಿಚಾರಗಳನ್ನು ಮಾತನಾಡಿದ್ದಾರೆ. ಯಾರೆಲ್ಲ ಅಡ್ಡ ಮತದಾನ ಮಾಡಿದ್ದಾರೆ, ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದ್ರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇದೆ. ಅಡ್ಡ ಮತದಾನ ಮಾಡ್ತಾರೆ ಅನ್ನುವ ನಿರೀಕ್ಷೆ ಮೊದಲೇ ಇತ್ತು. ಆದ್ದರಿಂದ ನನಗಿದು ಯಾವುದೇ ಅಚ್ಚರಿ, ಆಘಾತ ಉಂಟು ಮಾಡಿಲ್ಲ. ಅಂಥವರು ಯಾವ ರೀತಿ ನಡೆದುಕೊಳ್ಳಬಹುದು ಅನ್ನೋದನ್ನ ತಿಳಿಯೋಕೆ ಅಭ್ಯರ್ಥಿಯನ್ನ ಹಾಕಿದ್ದೆವು ಎಂದು ತಿಳಿಸಿದ್ದಾರೆ.
ಅಡ್ಡ ಮತದಾನ ಮಾಡಿದವರು ಪಕ್ಷ ಬಗ್ಗೆ ಚರ್ಚೆ ಮಾಡಿದ್ದಾರೆ. ಅದರೆ ಹೋಗುವವರೆಲ್ಲಾ ಹೋಗಲಿ ಎಂದೇ ಹೇಳುತ್ತೇನೆ. ನನಗೆ ಪಕ್ಷ ಕಟ್ಟುವುದು ಗೊತ್ತಿದೆ. ಜೆನ್ ಜೀ ಯುವಕರು ಬದಲಾವಣೆ ಕೇಳುತ್ತಿರುವುದೂ ಗೊತ್ತಿದೆ. ಮುಂದೆ ಪಕ್ಷದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಬೇಕೆಂದು ತೀರ್ಮಾನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ನಮಗೆ ಅಭ್ಯರ್ಥಿ ನಿಲ್ಲಿಸುವ ಯೋಚನೆ ಇರಲಿಲ್ಲ. ನಮಗೆ ನಿಜವಾದ ಅಗ್ನಿಪರೀಕ್ಷೆ ಇರೋದು 2028ರ ಚುನಾವಣೆ. ಆದ್ರೆ ನಮ್ಮಲ್ಲಿನ ಕೆಲವು ಶಾಸಕರು, ಅಭ್ಯರ್ಥಿ ಹಾಕದಿದ್ದರೆ ತಪ್ಪು ಸಂದೇಶ ಹೋಗುತ್ತೆ, ಸೋಲು-ಗೆಲುವು ಇದ್ದಿದ್ದೇ. ಅಭ್ಯರ್ಥಿಯನ್ನ ಹಾಕಲೇಬೇಕೆಂದು ಒತ್ತಾಯ ಮಾಡಿದ್ದರು. ನಮ್ಮ 17 ಮತಗಳು ಯಾವುದೇ ಕಾರಣಕ್ಕೂ ಒಡೆದು ಹೋಗೋದಕ್ಕೆ ಅವಕಾಶ ಕೊಡಬೇಡಿ ಅಂತ ಹೇಳಿದ್ದೆ. ಈ ಹಿಂದೆ ನನಗೆ ಅನುಭವ ಆಗಿದೆ ಅಂತಲೂ ಹೇಳಿದ್ದೆ. ಯಾರ‍್ಯಾರು ಯಾವ ರೀತಿ ಇದ್ದಾರೆಂದು ಪರೀಕ್ಷೆ ಮಾಡಬೇಕೆಂದು ಅಭಿಪ್ರಾಯ ಬಂದಿತ್ತು. ಹಿತಶತ್ರುಗಳು ಯಾರಿದ್ದಾರೆ ಅನ್ನೋದನ್ನ ತಿಳಿಯೋದಕ್ಕೆ ಅಭ್ಯರ್ಥಿ ನಿಲ್ಲಿಸಬೇಕೆಂದು ಸಭೆಯಲ್ಲಿ ತೀರ್ಮಾನ ಮಾಡಿದ್ದೆವು ಎಂದು ಕುಮಾರಸ್ವಾಮಿ ವಿವರಿಸಿದ್ದಾರೆ.
ನಿನ್ನೆಯ ಫಲಿತಾಂಶ ಇನ್ನೊಂದು ಅನುಭವ ಕೊಟ್ಟಿದೆ. ಯಾರನ್ನೂ ದೂಷಿಸಲ್ಲ, ಆದ್ರೆ ಅತಿಯಾಗಿ ನಂಬಿಕೆ ಇಡುವುದು ಸೂಕ್ತ ಅಲ್ಲ ಅಂತ ಕೆಲವರು ತೋರಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕರನ್ನು ಉಲ್ಲೇಖಿಸದೆ ಕುಟುಕಿದ್ದಾರೆ. ಶಾಸಕ ಜಿ.ಟಿ ದೇವೇಗೌಡರ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ಹೆಸರನ್ನ ನನ್ನ ಮುಂದೆ ಪ್ರಸ್ತಾಪಿಸಬೇಡಿ. ಅದೆಲ್ಲಾ ಮುಗಿದು ಹೋದ ಕಥೆ. ಅವರು ಒಂದು ಕಾಲಲ್ಲ ಎರಡು ಕಾಲನ್ನೂ ಹೊರಗಡೆ ಇಟ್ಟಿದ್ದಾರೆ. ಅವರ ಬಗ್ಗೆ ನಾನು ಈ ಹಿಂದೆ ಏನು ಹೇಳಿದೆನೋ ಅದೇ ಅಂತಿಮ. ಜಿ.ಟಿ.ಡಿ ವಿಚಾರದಲ್ಲಿ ನನ್ನ ಸ್ಟ್ಯಾಂಡ್ ಬಹಳ ಕ್ಲಿಯರ್ ಇದೆ. ದೊಡ್ಡ ಗೌಡರು ಹೇಳಿದರೂ ಪಕ್ಷ ಮತ್ತು ಕಾರ್ಯಕರ್ತರ ಹಿತದೃಷ್ಟಿಯಿಂದ ನನ್ನ ಸ್ಟ್ಯಾಂಡ್ ಬದಲಾಯಿಸುವುದಿಲ್ಲ. ಟಿಕೆಟ್ ಅಂತಿಮ ನಿರ್ಣಯ ಮಾಡುವುದು ನಾನೇ. ಅವರ ಬಗ್ಗೆ ನನ್ನ ಬಳಿ ಚರ್ಚೆ ಮಾಡಲೇಬೇಡಿ ಎಂದು ಕಟು ಸಂದೇಶ ರವಾನಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm