ಬ್ರೇಕಿಂಗ್ ನ್ಯೂಸ್
26-06-26 05:10 pm HK News Staffer ಕರ್ನಾಟಕ
ಬೆಂಗಳೂರು, ಜೂ 26: ಬಿಡದಿಯಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಒತ್ತಾಯಪೂರ್ವಕವಾಗಿ ರೈತರ ವಿರುದ್ಧವಾಗಿ ಟೌನ್‌ಶಿಪ್ ಕಟ್ಟುವುದರಲ್ಲಿ ಯಾವುದೇ ಅರ್ಥವಿಲ್ಲ. ಹೀಗಾಗಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ, ಅವರು ಒಪ್ಪಿಗೆ ಸೂಚಿಸಿದ ಬಳಿಕವೇ ಜಮೀನು ಪಡೆದು ಟೌನ್‌ಶಿಪ್ ಮಾಡಲು ಈಗಾಗಲೇ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಟೌನ್‌ಶಿಪ್ ವಿಚಾರದಲ್ಲಿ ರೈತರ ಸಹಮತಿ ಪಡೆದುಕೊಂಡು ಮುಂದೆ ಸಾಗುತ್ತೇವೆಯೇ ಹೊರತು, ಅವರನ್ನು ಒಕ್ಕಲೆಬ್ಬಿಸಿ ಟೌನ್‌ಶಿಪ್ ಮಾಡುವುದಿಲ್ಲ. ಒಂದು ವೇಳೆ ರೈತರಿಗೆ ಕೊಡುವ ಪರಿಹಾರ ಸಾಕಾಗುತ್ತಿಲ್ಲ ಎಂದು ಅನಿಸಿದರೆ ಹೆಚ್ಚಿಸುವ ಸಾಧ್ಯತೆಯಿದೆ. ಒಟ್ಟಾರೆ ಯಾವುದೇ ಗೊಂದಲ ಇಲ್ಲದೆ ಟೌನ್‌ಶಿಪ್ ಮಾಡಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.
ಎಐ ಹಬ್‌ಗಳಿಗೆ ಹೆಚ್ಚಿನ ನೀರಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಬಿಡದಿ ಪ್ರದೇಶದ ನೀರಿನ ಲಭ್ಯತೆಯನ್ನು ಮುಂದಿನ 40 ವರ್ಷಗಳ ದೃಷ್ಟಿಯಿಂದ ಸರ್ಕಾರ ಬಳಸಿಕೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ, ಎಐ ಸೆಂಟರ್ ಮಾಡುವುದಕ್ಕೆ ಯಾವುದೆಲ್ಲ ಮಾನದಂಡಗಳಿವೆ ಎಂಬುದರ ಸ್ಪಷ್ಟ ಮಾಹಿತಿ ಯಾರಿಗೂ ಗೊತ್ತಿಲ್ಲ. ಈಗ ಅದನ್ನು ನಾವು ಬೇರೆ ಬೇರೆ ಕಡೆ ಪತ್ತೆ ಮಾಡುತ್ತಿದ್ದೇವೆ. ಇದು ಎಐ ಹಬ್‌ಗಾಗಿ ಮಾಡುತ್ತಿರುವಂಥದ್ದಲ್ಲ. ಬೆಂಗಳೂರಿನ ಮೇಲೆ ಸಂಚಾರದಟ್ಟಣೆ ಸೇರಿದಂತೆ ಅನೇಕ ಒತ್ತಡವಿದೆ. ನೈಸ್ ಪ್ರಾಜೆಕ್ಟ್ ಮಾಡಿದ ಸಂದರ್ಭದಲ್ಲಿ 7 ಟೌನ್‌ಶಿಪ್ ಮಾಡಬೇಕು ಎಂಬ ಪ್ರಸ್ತಾವನೆ ಬಂದಿತ್ತು. ಇದರ ಉದ್ದೇಶ ಬೆಂಗಳೂರಿನ ಮೇಲಿರುವ ಒತ್ತಡ ಕಡಿಮೆಮಾಡಬೇಕು ಎನ್ನುವುದಾಗಿತ್ತು. ಪಕ್ಕದಲ್ಲಿರುವ ಕೋಲಾರ, ತುಮಕೂರು, ರಾಮನಗರ ಪಟ್ಟಣವನ್ನು ಅಭಿವೃದ್ಧಿ ಮಾಡಿದರೆ ಬೆಂಗಳೂರಿನ ಮೇಲಿರುವ ಒತ್ತಡ ಕಡಿಮೆಯಾಗಲಿದೆ ಎನ್ನುವುದು ನಮ್ಮ ಉದ್ದೇಶ. ಈ ಕಾರಣಗಳಿಂದ ಬಿಡದಿ ಟೌನ್‌ಶಿಪ್ ಆದರೆ ಸ್ವಲ್ಪ ಸುಧಾರಿಸಬಹುದು ಎಂದು ಅವರು ವಿವರಿಸಿದರು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm