ಬ್ರೇಕಿಂಗ್ ನ್ಯೂಸ್
28-06-26 06:30 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 28: ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಉತ್ಪನ್ನಗಳಲ್ಲಿ ಅಮಲು ಉಂಟುಮಾಡುವ ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಅಕ್ರಮ ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಹಾಗೂ ಗುಟ್ಕಾ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ದ ಅಂಗವಾಗಿ ಆಯೋಜಿಸಿದ್ದ ‘ನಶಾ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕ ವ್ಯಸನದ ವಿರುದ್ಧ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯವನ್ನು ವ್ಯಸನಮುಕ್ತವಾಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಅದಕ್ಕಾಗಿ ನಿರಂತರವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಯುವ ಸಮುದಾಯವನ್ನು ಮಾದಕ ವ್ಯಸನದ ದುಷ್ಪರಿಣಾಮಗಳಿಂದ ರಕ್ಷಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಇಂದಿನ ಈ ಅಭಿಯಾನವೂ ಅದೇ ನಿಟ್ಟಿನ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
"ವ್ಯಸನಮುಕ್ತ ನಾಳೆಯನ್ನು ನಿರ್ಮಿಸಲು ಸರ್ಕಾರದ ಪ್ರಯತ್ನ ಮಾತ್ರ ಸಾಕಾಗುವುದಿಲ್ಲ. ಶಿಕ್ಷಣ ಸಂಸ್ಥೆಗಳು, ಪೋಷಕರು, ವೈದ್ಯರು, ವಿದ್ಯಾರ್ಥಿಗಳು ಹಾಗೂ ಪ್ರತಿಯೊಬ್ಬ ನಾಗರಿಕರೂ ಈ ಅಭಿಯಾನದಲ್ಲಿ ಪಾಲುದಾರರಾಗಬೇಕು. ಯುವ ಪೀಳಿಗೆ ಮಾದಕ ವ್ಯಸನದ ಬಲೆಗೆ ಬೀಳದಂತೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನೀವು ಈ ಅಭಿಯಾನದ ರಾಯಭಾರಿಗಳಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು" ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜೀವ ಉಳಿಸುವ ವೈದ್ಯಕೀಯ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಮುಖ್ಯಮಂತ್ರಿ, ವೈದ್ಯರು ಸಮಾಜದಲ್ಲಿ ಆರೋಗ್ಯಕರ ಬದುಕಿನ ಬಗ್ಗೆ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನೂ ಹೊಂದಿದ್ದಾರೆ ಎಂದು ಹೇಳಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಾಧನೆಗಳನ್ನು ಸ್ಮರಿಸಿದ ಅವರು, ಇದು ದೇಶದಲ್ಲೇ ಅತಿ ದೊಡ್ಡ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವಾಗಿದ್ದು, ದೇಶಕ್ಕೆ ಅತಿ ಹೆಚ್ಚು ವೈದ್ಯರನ್ನು ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು. ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಕೊಡುಗೆಯನ್ನು ಇದೇ ಸಂದರ್ಭದಲ್ಲಿ ಸ್ಮರಿಸಿ ಅಭಿನಂದಿಸಿದರು.
ಕರ್ನಾಟಕದಲ್ಲಿ ಪ್ರಸ್ತುತ 70 ವೈದ್ಯಕೀಯ ಕಾಲೇಜುಗಳಿದ್ದು, ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೆಡಿಕಲ್ ಕಾಲೇಜುಗಳಿಲ್ಲ. ವೈದ್ಯಕೀಯ ಶಿಕ್ಷಣ ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಗೂ ಸುಲಭವಾಗಿ ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.
ಇದೇ ವೇಳೆ ಮಹತ್ವದ ಘೋಷಣೆ ಮಾಡಿರುವ ಮುಖ್ಯಮಂತ್ರಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆಯ ನೂತನ ಅತ್ಯಾಧುನಿಕ ಹೈಟೆಕ್ ಕ್ಯಾಂಪಸ್‌ಗೆ ಸ್ಥಳಾಂತರಿಸಲಾಗುವುದು ಎಂದು ಪ್ರಕಟಿಸಿದರು.
ಕರ್ನಾಟಕವು ವೈದ್ಯಕೀಯ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದು, ಇಲ್ಲಿ ಅತ್ಯಾಧುನಿಕ ಆಸ್ಪತ್ರೆಗಳು, ಪರಿಣತ ವೈದ್ಯರು ಹಾಗೂ ಉನ್ನತ ಮಟ್ಟದ ಆರೋಗ್ಯ ಸೇವೆಗಳು ಲಭ್ಯವಿವೆ. ಇದೇ ಕಾರಣಕ್ಕೆ ಕರ್ನಾಟಕವನ್ನು ದೇಶದ ವೈದ್ಯಕೀಯ ರಾಜಧಾನಿ ಎಂದು ಕರೆಯಲಾಗುತ್ತಿದೆ. ಜೊತೆಗೆ ಬೆಂಗಳೂರಿನ ಆಹ್ಲಾದಕರ ಹವಾಮಾನದಿಂದಾಗಿ ಇದನ್ನು ‘ಹವಾನಿಯಂತ್ರಿತ ನಗರ’ ಎಂದು ಕೂಡ ಕರೆಯಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಆರೋಗ್ಯಕರ, ಸುರಕ್ಷಿತ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವ ಸಂಕಲ್ಪವನ್ನು ಇದೇ ಸಂದರ್ಭದಲ್ಲಿ ಕೈಗೊಳ್ಳಲಾಯಿತು.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm